
ಬೆಂಗಳೂರು, ಮೇ 12: ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ‘ಆಳ್ವಾಸ್ ಪಗ್ರತಿ-2024’ಎಂಬ ಹೆಸರಿನಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜನೆ ಮಾಡಿದ್ದು, ಜೂನ್‌ನಲ್ಲಿ ಉದ್ಯೋಗ ಮೇಳ ನಡೆಯಲಿದ್ದು, ಆಸಕ್ತರು ನೋಂದಣಿ ಮಾಡಿಕೊಳ್ಳಬಹುದು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮ್ಯಾನೇಜ್‌ಮೆಂಟ್ ಟ್ರಸ್ಟಿ ವಿವೇಕ್ ಆಳ್ವ ಈ ಕುರಿತು ಮಾಹಿತಿ ನೀಡಿದರು. ಜೂನ್ 7 ಮತ್ತು 8ರಂದು ಮೂಡುಬಿದಿರೆಯಲ್ಲಿ 14ನೇ ಆವೃತ್ತಿಯ ‘ಆಳ್ವಾಸ್ ಪಗ್ರತಿ-2024’ ಬೃಹತ್ ಉದ್ಯೋಗ ಮೇಳ ನಡೆಯಲಿದೆ ಎಂದರು.


ವಿದ್ಯಾಗಿರಿ ಕಾಲೇಜು ಆವರಣದಲ್ಲಿ ನಡೆಯುವ ಉದ್ಯೋಗ ಮೇಳದಲ್ಲಿ ಬ್ಯಾಂಕಿಂಗ್, ಹಣಕಾಸು, ಐಟಿ, ಐಟಿಎಸ್, ಹೆಲ್ತ್‌ಕೇರ್, ಫಾರ್ಮಾ, ಮಾರಾಟ, ಆಟೋಮೊಬೈಲ್, ಟೆಲಿಕಾಂ, ಮಾಧ್ಯಮ, ಶಿಕ್ಷಣ ಮತ್ತು ಎನ್‌ಜಿಓಗಳು ಸಹ ಪಾಲ್ಗೊಳ್ಳಲಿವೆ.
ನೋಂದಣಿ ಮಾಡಿಕೊಳ್ಳಿ: ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವ ಕಂಪನಿಗಳು ಪದವಿ, ಸ್ನಾತಕೋತ್ತರ ಪದವಿ, ವೈದ್ಯಕೀಯ, ಪ್ಯಾರಾ ಮೆಡಿಕಲ್, ಇಂಜಿನಿಯರಿಂಗ್, ಕಲಾ, ವಾಣಿಜ್ಯ, ಮ್ಯಾನೇಜ್‌ಮೆಂಟ್, ಐಟಿಐ, ಡಿಪ್ಲೊಮಾ, ಪಿಯಿಸಿ, ಎಸ್‌ಎಸ್‌ಎಲ್‌ಸಿ ಸೇರಿದಂತೆ ವಿವಿಧ ವಿದ್ಯಾರ್ಹತೆಯ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿವೆ. ಅರ್ಜಿ ಆಹ್ವಾನ ಜೂನ್‌ನಲ್ಲಿ ನಡೆಯುವ ಉದ್ಯೋಗ ಮೇಳದಲ್ಲಿ ಭಾಗವಹಿಸುವ ಕಂಪನಿಗಳ ವಿವರ www.alvaspragati.com ವೆಬ್‌ಸೈಟ್‌ನಲ್ಲಿದೆ. ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ಆಸಕ್ತಿ ಇರುವ ಅಭ್ಯರ್ಥಿಗಳು ವೆಬ್‌ಸೈಟ್‌ನಲ್ಲಿ ಕಡ್ಡಾಯವಾಗಿ ಉಚಿತವಾಗಿ ನೋಂದಣಿ ಮಾಡಿಕೊಳ್ಳಬಹುದು.


ಆಳ್ವಾಸ್ ಶಿಕ್ಷಣ ಸಂಸ್ಥೆಯ ಪರಿಣತರ ತಂಡ ಆಳ್ವಾಸ್ ಪ್ರಗತಿ ಉದ್ಯೋಗ ಮೇಳದಲ್ಲಿ ಸಿಗುವ ಉದ್ಯೋಗ, ಸಂದರ್ಶನ ಕೌಶಲ್ಯಗಳ ತರಬೇತಿಯನ್ನು ವಿವಿಧ ಕಡೆಗಳಲ್ಲಿ ಆಯೋಜನೆ ಮಾಡಲಿದೆ.

ಎರಡು ದಿನಗಳ ಕಾಲ ನಡೆಯುವ ಉದ್ಯೋಗ ಮೇಳದಲ್ಲಿ 200ಕ್ಕೂ ಅಧಿಕ ಕಂಪನಿಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಹಲವು ಕಾಲೇಜುಗಳ ಪ್ರಿನಿಪಾಲರಿಗೆ ಉದ್ಯೋಗ ಮೇಳದ ಕುರಿತು ಮುಂಚೆಯೇ ಮಾಹಿತಿ ನೀಡಲಾಗುತ್ತದೆ. ಈ ಮೂಲಕ ಕಾಲೇಜು ವಿದ್ಯಾರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲು ಅನುಕೂಲ ಮಾಡಿಕೊಡಲಾಗುತ್ತದೆ.
ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ಇದುವರೆಗೂ 60 ಕಂಪನಿಗಳು ನೋಂದಣಿ ಮಾಡಿಕೊಂಡಿವೆ. ಹೈದರಾಬಾದ್ ಮೂಲದ ಫ್ಯಾಕ್ಟ್ಸೆಟ್, ಇಎಕ್ಸ್ಎಲ್ ಸರ್ವೀಸ್, ಮಹೀಂದ್ರಾ ಫಿನಾನ್ಸ್, ಎಚ್‌ಡಿಎಫ್‌ಸಿ, ಆ್ಯಕ್ಸಿಸ್, ಐಡಿಎಫ್‌ಸಿ ಫಸ್ಟ್ ಬ್ಯಾಂಕ್, ಬಂಧನ್ ಬ್ಯಾಂಕ್ ಹಾಗೂ ಇನ್ನಿತರ ಸಂಸ್ಥೆಗಳು ಉದ್ಯೋಗ ಮೇಳದಲ್ಲಿ ನೇಮಕಾತಿ ಮಾಡಿಕೊಳ್ಳಲಿವೆ.
ಉದ್ಯೋಗ ಮೇಳಕ್ಕೆ ಹೊರ ಜಿಲ್ಲೆಯಿಂದ ಆಗಮಿಸುವ ಅಭ್ಯರ್ಥಿಗಳಿಗೆ ವಸತಿ ವ್ಯವಸ್ಥೆ ಇದೆ. ಹೆಚ್ಚಿನ ಮಾಹಿತಿಗಾಗಿ 9008907716, 9663190590, 7975223865, 9741440490 ಸಂಖ್ಯೆಗೆ ಕರೆ ಮಾಡಬಹುದು. ನೋಂದಣಿ ಹಾಗೂ ಇತರ ಮಾಹಿತಿಗೆ ಮೊಬೈಲ್ ಸಂಖ್ಯೆ 8971250414.