ಮಂಗಳೂರು: ಸೋಷಿಯಲ್ ಮೀಡಿಯಾದಲ್ಲಿ ಮತ್ತೆ ಪ್ರತೀಕಾರ ಪೋಸ್ಟ್‌..!! 16 Instagram ಖಾತೆ ವಿರುದ್ಧ FIR

0 0
Read Time:2 Minute, 34 Second

ಮಂಗಳೂರು: ಪೊಲೀಸರ ಕಟ್ಟುನಿಟ್ಟಿನ ಕ್ರಮದ ಬಳಿಕ ಸೋಷಿಯಲ್‌ ಮೀಡಿಯಾದಲ್ಲಿ ಗಲಭೆ, ಹಿಂಸೆಗೆ ದುಷ್ಪ್ರೇರಣೆ ನೀಡುವ ಪೋಸ್ಟ್‌ಗಳು ಕಡಿಮೆಯಾಗಿದ್ದವು. ಇದೀಗ ಮತ್ತೆ ಸೋಷಿಯಲ್‌ ಮೀಡಿಯಾದಲ್ಲಿ ಇಂತಹಾ ಪೋಸ್ಟ್‌ಗಳು ಕಾಣಿಸಿದ್ದು ಆತಂಕಕ್ಕೆ ಕಾರಣವಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಕಲಾಯಿ ಅಶ್ರಫ್ ಹತ್ಯೆಗೆ ಪ್ರತೀಕಾರದ ಬಗ್ಗೆ ಸಂದೇಶಗಳು ಓಡಾಡುತ್ತಿದ್ದು, Target 900, Team Target Boys, Immu Bai ಇನ್ಸ್ಟಾಗ್ರಾಮ್ ಪೇಜ್​​ಗಳಲ್ಲಿ ಭಯ ಹುಟ್ಟಿಸುತ್ತಿರುವ ರೀತಿಯಲ್ಲಿ ಪೋಸ್ಟ್ ಮಾಡಲಾಗಿದೆ. 2017ರಲ್ಲಿ ನಡೆದ ಎಸ್​ಡಿಪಿಐ ಮುಖಂಡ ಕಲಾಯಿ ಅಶ್ರಫ್ ಹತ್ಯೆ ಪ್ರಮುಖ ಆರೋಪಿ, ಹಿಂದೂ ಸಂಘಟನೆಯ ಮುಖಂಡ ಭರತ್ ಕುಮ್ಡೇಲ್​​​ಗೆ ಈ ಮೂಲಕ ಎಚ್ಚರಿಕೆ ನೀಡಲಾಗಿದೆ.

Revange Is Loading , Target Set One By One ಎಂಬ ಸಂದೇಶ ಇರುವ ಪೋಸ್ಟ್​​ ಮಾಡಲಾಗಿದ್ದು, ಕೈಯಲ್ಲಿ ತಲವಾರು ಮತ್ತು ಪಿಸ್ತೂಲ್ ಹಿಡಿದು ಮುಖ ಮರೆಮಾಚಿ ಮಾಡಿರುವ ರೀಲ್ಸ್ ಕೂಡ ಪೋಸ್ಟ್​​ ಮಾಡಲಾಗಿದೆ. ಇತ್ತೀಚೆಗೆ ಕೇರಳದಲ್ಲಿ ಹತ್ಯೆಯಾದ ರೌಡಿಶೀಟರ್ ನೌಫಾಲ್ ಸಾವಿಗೂ ಪ್ರತೀಕಾರದ‌ ಎಚ್ಚರಿಕೆ ನೀಡಲಾಗಿದೆ. ಭರತ್ ಕುಮ್ಡೇಲ್ ಸದ್ಯ ಮಂಗಳೂರು ಜೈಲಿನಲ್ಲಿದ್ದು, ಪ್ರಚೋದನಾಕಾರಿ ಇನ್ಸ್ಟಾಗ್ರಾಮ್​​ ಪೋಸ್ಟ್​ಗಳ ಮೇಲೆ ಮಂಗಳೂರು ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಈ ಬಗ್ಗೆ ಸುಮೋಟೊ ಕೇಸ್​​ ದಾಖಲಿಸಿರುವ ಖಾಕಿ, 16 ಇನ್ಸ್ಟಾಗ್ರಾಮ್​​ ಖಾತೆಗಳ ವಿರುದ್ಧ ಎಫ್​ಐಆರ್​ ಮಾಡಿದೆ. ಜೊತೆಗೆ ಆಯಕಟ್ಡಿನ ಜಾಗಗಳ ಮೇಲೆ ಹದ್ದಿನ ಕಣ್ಣಿಡಲಾಗಿದ್ದು, ನಟೋರಿಯಸ್ ಗ್ಯಾಂಗ್​​ಗಳ ಚಲನವಲನಗಳನ್ನೂ ಗಮನಿಸಲಾಗುತ್ತಿದೆ. ಈ ಹಿಂದೆಯೂ ಭರತ್ ಕುಮ್ಡೇಲ್​​ಗೆ ಸಾಮಾಜಿಕ ತಾಣಗಳ ಮೂಲಕ ಕೊಲೆ ಬೆದರಿಕೆ ಹಾಕಲಾಗಿತ್ತು. BEARY_ROYAL_NAWAB, ಬ್ಯಾರಿ ಟ್ರೋಲರ್, ಮಂಗಳೂರು ಕಿಂಗ್ ಎಂಬ ಹೆಸರಿನ ಪೇಜ್​ಗಳ ಮುಖಾಂತರ ಎಚ್ಚರಿಕೆಯ ಸಂದೇಶ ಬಂದಿತ್ತು. ಭರತ್‌ ಕುಮ್ಡೇಲ್​​​ ರಕ್ತ ಈ ಭೂಮಿಗೆ ಹರಿಸದೆ ನಮಗೆ ಸಮಾಧಾನವಿಲ್ಲ. ನಮ್ಮ ಸಹೋದರ ಶಾಹಿದ್ ಅಶ್ರಫ್ ಕಲಾಯಿಯನ್ನು ಮರೆತಿಲ್ಲ, ಪ್ರತಿರೋಧ ಅಪರಾಧವಲ್ಲ ಎಂದು ಪೋಸ್ಟ್​​ ಮಾಡಲಾಗಿತ್ತು.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *