ಶಿರಗಾವ್‌ ದೇವಸ್ಥಾನದಲ್ಲಿ ಕಾಲ್ತುಳಿತ; 7 ಸಾವು, 30ಕ್ಕೂ ಹೆಚ್ಚು ಮಂದಿಗೆ ಗಾಯ

0 0
Read Time:1 Minute, 43 Second

ಗೋವಾ: ಉತ್ತರ ಗೋವಾದ ಶಿರ್ಗಾವ್​​​ ದೇವಸ್ಥಾನದ ಜಾತ್ರಾ ಮಹೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 7 ಜನರು ಸಾವನ್ನಪ್ಪಿದ್ದು, 30ಕ್ಕೂ ಅಧಿಕ ಜನರಿಗೆ ಗಾಯಗಳಾಗಿರುವಂತಹ ಘಟನೆ ನಡೆದಿದೆ.

ಗೋವಾದ ಶಿರ್ಗಾಂವ್ ಗ್ರಾಮದಲ್ಲಿ ಲೈರೈ ದೇವಿ ವಾರ್ಷಿಕ ಜಾತ್ರಾ ಮಹೋತ್ಸವ ಜರುಗಿತ್ತು. ಶತಮಾನಗಳಷ್ಟು ಹಳೆಯದಾದ ಈ ದೇವಿ ದೇವಸ್ಥಾನದ ಆಚರಣೆಗಳನ್ನು ಕಣ್ತುಂಬಿಕೊಳ್ಳಲು ಸಾವಿರಾರು ಭಕ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದ ವೇಳೆ ಈ ಅವಘಡ ಸಂಭವಿಸಿದೆ.ಜಾತ್ರಾ ಮಹೋತ್ಸವ ವೇಳೆ ಜನರು ಗುಂಪೊಂದು ನಿಯಂತ್ರಣ ಕಳೆದುಕೊಂಡು ಕಾಲ್ತುಳಿತ ಸಂಭವಿಸಿದೆ. ನಂತರ ಪರಿಸ್ಥಿತಿ ವಿಕೋಪಕ್ಕೆ ಹೋಯಿತು. ಸ್ಥಳೀಯರು ಮತ್ತು ಸ್ವಯಂಸೇವಕರು ಜನರನ್ನು ಸುರಕ್ಷಿತ ಸ್ಥಳಕ್ಕೆ ಕರೆದುಕೊಂಡು ಹೋದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.ಇನ್ನು ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಪ್ರಮೋದ್ ಸಾವಂತ್, ಇಂದು ಬೆಳಿಗ್ಗೆ ಶಿರ್ಗಾಂವ್‌ನ ಲೈರೈ ಜಾತ್ರಾದಲ್ಲಿ ಸಂಭವಿಸಿದ ದುರಂತ ಕಾಲ್ತುಳಿತದಿಂದ ತೀವ್ರ ದುಃಖಿತನಾಗಿದ್ದೇನೆ. ನಾನು ಆಸ್ಪತ್ರೆಗೆ ತೆರಳಿ ಗಾಯಾಳುಗಳನ್ನು ಭೇಟಿ ಮಾಡಿದ್ದು, ಸಂತ್ರಸ್ತ ಕುಟುಂಬಗಳಿಗೆ ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದೇನೆ. ಅಗತ್ಯ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದಿದ್ದಾರೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *