ಮಂಗಳೂರು: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪ – 34.80 ಲಕ್ಷ ರೂ ವಂಚನೆ

0 0
Read Time:1 Minute, 35 Second

ಮಂಗಳೂರು: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಿನಲ್ಲಿ ವ್ಯಕ್ತಿಯೋರ್ವರಿಂದ 34.80 ಲಕ್ಷ ರೂಪಾಯಿ ಪಡೆದು ವಂಚಿಸಿದ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ದೂರುದಾರರು ಜುಲೈ 1ರಂದು ಇನ್‌ಸ್ಟಾಗ್ರಾಂನಲ್ಲಿ ಷೇರು ವ್ಯಾಪಾರ ಕಂಪೆನಿಯ ಬಗ್ಗೆ ಇದ್ದ ಲಿಂಕ್ ಅನ್ನು ನೋಡಿ ಅದರ ಮೂಲಕ ಅಪ್ಲಿಕೇಷನ್ ಡೌನ್‌ಲೋಡ್ ಮಾಡಿಕೊಂಡಿದ್ದರು. ಅನಂತರ ಅದರಲ್ಲಿ ಕಸ್ಟಮರ್ ಸರ್ವೀಸ್ ನ ಚಾಟ್ ಬಾಕ್ಸ್‌ನಲ್ಲಿ ಅಪರಿಚಿತ ವ್ಯಕ್ತಿಗಳು ಷೇರು ಮಾರುಕಟ್ಟೆಯ ಬಗ್ಗೆ ತಿಳಿಸಿ ಹಣ ಹೂಡಿಕೆ ಮಾಡಿ ಹೆಚ್ಚಿನ ಹಣ ಗಳಿಸಬಹುದೆಂದು ಪ್ರೇರೇಪಿಸಿದ್ದರು. ಅದನ್ನು ನಂಬಿ ಜುಲೈ 1ರಿಂದ ಆಗಷ್ಟ್ 12ರವರೆಗೆ ಹಂತ ಹಂತವಾಗಿ ಅಪರಿಚಿತ ವ್ಯಕ್ತಿಯು ನೀಡಿದ ಬೇರೆ ಬೇರೆ ಬ್ಯಾಂಕ್ ಖಾತೆಗಳಿಗೆ ಒಟ್ಟು 34,80,000 ರೂಪಾಯಿಗಳನ್ನು ವರ್ಗಾಯಿಸಿದ್ದರು. ಕೆಲವು ದಿನಗಳ ಅನಂತರ ಹೂಡಿಕೆ ಮಾಡಿದ ಹಣವನ್ನು ಹಿಂಪಡೆಯಲು ಮುಂದಾದಾಗ ಅಪರಿಚಿತ ವ್ಯಕ್ತಿಗಳು ಶೇಕಡಾ 20ರಷ್ಟು ತೆರಿಗೆ ಪಾವತಿಸುವಂತೆ ತಿಳಿಸಿದರು. ದೂರುದಾರರು ಹಣವನ್ನು ವಾಪಸ್‌ ಪಡೆಯಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ಆಗ ತಾನು ಮೋಸ ಹೋಗಿರುವುದು ಗೊತ್ತಾಗಿದೆ. ಈ ಬಗ್ಗೆ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *