
Read Time:1 Minute, 11 Second
ನವದೆಹಲಿ : ದೇಶದಾದ್ಯಂತ ಇಂದು 77ನೇ ಗಣರಾಜ್ಯೋತ್ಸವ ಸಂಭ್ರಮಾಚರಣೆ ಆಚರಿಸಲಾಗುತ್ತಿದ್ದು ಈ ಹಿನ್ನಲೆಯಲ್ಲಿ ಇಂದು ನವದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ರಾಷ್ಟ್ರೀಯ ಸಮರ ಸ್ಮಾರಕಕ್ಕೆ ಭೇಟಿ ನೀಡಿ ಹುತಾತ್ಮ ಯೋಧರ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು.



ದೆಹಲಿ 77ನೇ ಗಣರಾಜ್ಯೋತ್ಸವ ಸಂಭ್ರಮದ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ಏಳು ಸುತ್ತಿನ ಕೋಟೆಯಾಗಿದೆ. ಕರ್ತವ್ಯ ಪಥದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯಲಿದ್ದು, ರಾಷ್ಟ್ರೀಯ ಗೀತೆ ವಂದೇ ಮಾತರಂ ಗೆ 150 ವರ್ಷ, ಒಂದೇ ಮಾತರಂ ಪರಿಕಲ್ಪನೆಯಡಿ ಗಣರಾಜ್ಯೋತ್ಸವ ಆಚರಣೆ ಮಾಡಲಾಗುತ್ತಿದ್ದು, 26 ಯುದ್ಧ ವಿಮಾನಗಳಿಂದ ವೈಮಾನಿಕ ಪ್ರದರ್ಶನ, 17 ರಾಜ್ಯ, 10 ಇಲಾಖೆಗಳ ಸ್ತಬ್ಧ ಚಿತ್ರಗಳ ಅನಾವರಣ ಪಥಸಂಚಲಕ್ಕೆ ಎಐ ತಂತ್ರಜ್ಞಾನದ ಕ್ಯಾಮೆರಾ ಕಣ್ಗಾವಲು ಹಾಗೂ ಆಪರೇಷನ್ ಸಿಂಧೂರ ಯುದ್ಧ ಅಭಿಮಾನಿಗಳ ಪ್ರದರ್ಶನ ನಡೆಯಲಿದೆ.

