ಉಡುಪಿ: 9 ಮಂದಿ ಬಾಂಗ್ಲಾದೇಶಿಯರು ಪೊಲೀಸರ ವಶಕ್ಕೆ

0 0
Read Time:1 Minute, 27 Second

ಉಡುಪಿ: ಮೀನುಗಾರಿಕಾ ಕಾರ್ಮಿಕರಾಗಿ ಉದ್ಯೋಗ ಆರಿಸಿಕೊಂಡು ಬಂದ ಒಂಬತ್ತು ಮಂದಿ ಬಾಂಗ್ಲಾದೇಶಿಯರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಉಡುಪಿಯ ಮಲ್ಪೆ ವಡಬಾಂಡೇಶ್ವರ ಬಸ್‌ ನಿಲ್ದಾಣ ಬಳಿ ನಡೆದಿದೆ.

ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ತೆರಳಲು ಪ್ರಯತ್ನಿಸಿದ್ದ ಮಹಮ್ಮದ್ ಮಾಣಿಕ್ ಎಂಬಾತನನ್ನು ವಿಚಾರಣೆಗೆ ಒಳಪಡಿಸಿದಾಗ ಆತ ಮಲ್ಪೆಯಲ್ಲಿ ಇರುವವರ ಬಗ್ಗೆ ಮಾಹಿತಿ ನೀಡಿದ್ದನು. ಬಾಂಗ್ಲಾದೇಶದ ಇಮಿಗ್ರಷನ್ ಅಧಿಕಾರಿಗಳ ಪರಿಶೀಲನೆ ವೇಳೆ ಈತ ಬಾಂಗ್ಲಾದೇಶದ ಮಾಣಿಕ್ ಚೌಕ್ ರಾಜಶಾಹಿ ಎಂದು ತಿಳಿದುಬಂದಿದೆ. ಈತನ ವಿಚಾರಣೆ ವೇಳೆ ಹಲವರು ಮಲ್ಪೆಯಲ್ಲಿರುವುದು ಪತ್ತೆಯಾಗಿದೆ.

ಹಕೀಂ ಅಲಿ, ಸುಜೋನ್, ಇಸ್ಮಾಯಿಲ್, ಕರೀಂ, ಸಲಾಂ, ರಾಜಿಕುಲ್‌, ಮೊಹಮ್ಮದ್ ಸೋಜಿಬ್, ಕಾಜೋಲ್, ಉಸ್ಮಾನ್ ಬಂಧಿತರು. ಇವರು ನಕಲಿ ದಾಖಲಾತಿ ಸೃಷ್ಟಿಸಿ ಇಲ್ಲಿ ತಂಗಿದ್ದರು. ಆರೋಪಿಗಳ ಬಳಿ ನಕಲಿ ಆಧಾರ್ ಕಾರ್ಡ್ ಪತ್ತೆಯಾಗಿದೆ. ಆರೋಪಿ ಉಸ್ಮಾನ್ ಎಂಬಾತ ಅಕ್ರಮವಾಗಿ ಕರೆತಂದು ಇವರಿಗೆ ಉದ್ಯೋಗಕ್ಕೆ ವ್ಯವಸ್ಥೆ ಮಾಡಿದ್ದ. ಇವರನ್ನು ವಶಕ್ಕೆ ಪಡೆದಿರುವ ಮಲ್ಪೆ ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *