ಮಂಗಳೂರು: ಲೈಂಗಿಕ ದೌರ್ಜನ್ಯವೆಸಗಿ ಕೊಲೆ ಪ್ರಕರಣ- ಅಪರಾಧಿಗೆ ಮರಣದಂಡನೆ ಶಿಕ್ಷೆ..! ಕೋರ್ಟ್ ತೀರ್ಪು

0 0
Read Time:4 Minute, 3 Second

ಮಂಗಳೂರು: ಅಪ್ರಾಪ್ತ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗೆ ಮರಣದಂಡನೆ ಶಿಕ್ಷೆ ವಿಧಿಸಿ ಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಶಿಕ್ಷೆಗೆ ಗುರಿಯಾದ ಆರೋಪಿ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಫಕ್ಕೀರಪ್ಪ ಹಣಮಪ್ಪ ಮಾದರ(51) ಎಂದು ಗುರುತಿಸಲಾಗಿದೆ.

ದಿನಾಂಕ 06-08-2024 ರಂದು ಜೋಕಟ್ಟೆ ಬಾಡಿಗೆ ಮನೆಯೊಂದರಲ್ಲಿ ತನ್ನ ಚಿಕ್ಕಪ್ಪನೊಂದಿಗೆ ವಾಸವಾಗಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಲೈಂಗಿಕ ಹಲ್ಲೆ ನಡೆಸಿ, ಕೊಲೆ ಮಾಡಿದ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ಕೈಗೊಂಡ ಪೊಲೀಸರು ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಫಕ್ಕೀರಪ್ಪ ಹಣಮಪ್ಪ ಮಾದರ(51) ನನ್ನು ಬಂಧಿಸಿದ್ದರು. ಇದೀಗ ಆತನ ಆರೋಪ ಸಾಬೀತಾಗಿದ್ದು ಆತನಿಗೆ ನ್ಯಾಯಾಲಯವು ಕಲಂ: 103(1) {ಕೊಲೆ} ಬಿ ಎನ್ ಎಸ್ ಕಾಯ್ದೆ ಅಡಿಯಲ್ಲಿ ಮರಣದಂಡನೆ ಶಿಕ್ಷೆ,, ಕಲಂ: 4(2) { ಲೈಂಗಿಕ ಹಲ್ಲೆ} ಪೊಕ್ಸ್ ಕಾಯ್ದೆ ಅಡಿಯಲ್ಲಿ ಅಜೀವ ಕಾರಾವಾಸ ಮತ್ತು 50 ಸಾವಿರ ದಂಡ, ದಂಡ ಪಾವತಿಸಲು ತಪ್ಪಿದಲ್ಲಿ ಹೆಚ್ಚುವರಿ 4 ತಿಂಗಳ ಕಾರಗೃಹ ಶಿಕ್ಷೆ ಮತ್ತು ಕಲಂ: 332(ಎ) {ಅಪರಾಧಿಕ ಆತಿ ಕ್ರಮಣ } ಬಿ ಎನ್ ಎಸ್ ಕಾಯ್ದೆಯಡಿಯಲ್ಲಿ 50 ಸಾವಿರ ದಂಡ, ದಂಡ ಪಾವತಿಸಲು ತಪ್ಪಿದಲ್ಲಿ ಹೆಚ್ಚುವರಿ 4 ತಿಂಗಳ ಕಾರಗೃಹ ಶಿಕ್ಷೆಯನ್ನು ಪ್ರಕಟಿಸಿ ತೀರ್ಪು ನೀಡಿದೆ.

ಈ ಪ್ರಕರಣದಲ್ಲಿ ಆರೋಪಿ ಜಾಮೀನು ಸಿಗದೆ ಸುಮಾರು 1 ವರ್ಷದಿಂದ ವಿಚಾರಣಾ ಬಂಧಿಯಾಗಿದ್ದ ಸಮಯದಲ್ಲಿ ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಆರೋಪಿಯ ಅಪರಾಧ ಸಾಬೀತಾಗಿ ಶಿಕ್ಷೆಯಾಗಿರುವುದಾಗಿದೆ. ಪ್ರಕರಣವು ದಾಖಲಾಗಿ ಕೇವಲ 1 ವರ್ಷ 1 ತಿಂಗಳಿನಲ್ಲಿಯೇ ಸಂಪೂರ್ಣ ಪ್ರಕರಣದ ವಿಚಾರಣೆ ನಡೆದು ತೀರ್ಪು ಪ್ರಕಟಗೊಂಡಿದೆ.

ಪ್ರಕರಣದ ತನಿಖೆಯು ಮಂಗಳೂರು ನಗರದ ಈ ಹಿಂದಿನ ಮಾನ್ಯ ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್ಐ.ಪಿ.ಎಸ್., ಶ್ರೀ ಸಿದ್ದಾರ್ಥ ಗೋಯಲ್ ಐ.ಪಿ.ಎಸ್ ಉಪ ಪೊಲೀಸ್ ಆಯುಕ್ತರು (ಕಾನೂನು ಸುವ್ಯವಸ್ಥೆ) ಮತ್ತು ಬಿ.ಪಿದಿನೇಶ್ ಕುಮಾರ್ ಉಪ ಪೊಲೀಸ್ ಆಯುಕ್ತರು (ಅಪರಾಧ ಮತ್ತು ಸಂಚಾರ), ಶ್ರೀಕಾಂತ್ ಕೆ ಮಾನ್ಯ ಸಹಾಯಕಪೊಲೀಸ್‌ ಆಯುಕ್ತರು ಉತ್ತರ ಉಪ ವಿಭಾಗ ರವರ ಮಾರ್ಗದರ್ಶನದಂತೆ ಪಣಂಬೂರು ಪೊಲೀಸ್ ಠಾಣೆಯ ಪೊಲೀಸ್ನಿರೀಕ್ಷಕ ಮೊಹಮ್ಮದ್ ಸಲೀಂ ಅಬ್ಬಾಸ್, ರವರು ಸಂಪೂರ್ಣ ತನಿಖಾ ನಡೆಸಿ ಮಾನ್ಯ ನ್ಯಾಯಾಲಯಕ್ಕೆದೋಷಾರೋಪಣಾ ಪತ್ರ ಸಲ್ಲಿಸಿರುತ್ತಾರೆ.

ಪ್ರಸ್ತುತ ಮಾನ್ಯ ನ್ಯಾಯಾಲಯದ ವಿಚಾರಣಾ ಕಾಲದಲ್ಲಿ ಕೋರ್ಟ್ ಮಾನಿಟರಿಂಗ್ ಮಿಥುನ್ ಹೆಚ್. ಎನ್. ಐ.ಪಿ.ಎಸ್. ಡಿ.ಸಿ.ಪಿ (ಕಾನೂನು ಮತ್ತು ಸುವ್ಯವಸ್ಥೆ),ಕೆ. ರವಿಶಂಕರ್ ಉಪ ಪೊಲೀಸ್‌ ಆಯುಕ್ತರು (ಅಪರಾಧ ಮತ್ತು ಸಂಚಾರ) ರವರ ಮಾರ್ಗದರ್ಶನದಲ್ಲಿ ನಡೆದಿರುತ್ತದೆ. ಪ್ರಕರಣದ ತನಿಖೆಯ ಸಮಯದಲ್ಲಿ ಪಣಂಬೂರು ಠಾಣಾ ಪಿ ಎಸ್ ಐ ರವರುಗಳಾದ ಶ್ರೀಮತಿ ಶ್ರೀಕಲಾ ಕೆ.ಟಿ, ಜ್ಞಾನಶೇಖರ, ಹೆಚ್.ಸಿ ಗಳಾದ ಸತೀಶ್ ಎಮ್ ಆರ್, ಪ್ರೇಮಾನಂದ, ಜೇಮ್ಸ್ ಪಿ ಜಿ, ಸಯ್ಯದ್ ಇಮ್ಮಿಯಾಜ್, ನವೀನ್ ಚಂದ್ರ, ಸಿಪಿಸಿ ಗಳಾದ ರಾಕೇಶ್, ಫಕೀರೇಶ, ಶಶಿಕುಮಾರ್ ಶೆಟ್ಟರ್, ಹಾಗೂ ಕೋರ್ಟ್ ಮಾನಿಟರಿಂಗ್ ನಲ್ಲಿ ಸುರೇಶ್ ರಾಥೋಡ್ ರವರುಗಳು ಸಹಕರಿಸಿರುತ್ತಾರೆ. ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕಿ ಶ್ರೀಮತಿ ಸಹನಾದೇವಿ ರವರು ವಾದ ಮಂಡಿಸಿರುತ್ತಾರೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *