
ಧರ್ಮಸ್ಥಳ ಬುರುಡೆ ಕೇಸ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಎಸ್ಐಟಿ ಮುಖ್ಯಸ್ಥ ಪ್ರಣವ್ ಮೋಹಂತಿ ಗೃಹ ಸಚಿವ ಜಿ. ಪರಮೇಶ್ವರ್ ಅವರನ್ನು ಭೇಟಿಯಾಗಿ ಮಾಹಿತಿ ನೀಡಿದರು. ಬಳಿಕ ಗೃಹ ಸಚಿವ ಜಿ ಪರಮೇಶ್ವರ್ ಅವರು ಧರ್ಮಸ್ಥಳ ಪ್ರಕರಣದ ಕುರಿತು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚಿಸಿದರು.


ಇನ್ನು ಈ ಪ್ರಕರಣದ ಕುರಿತು, ಎಸ್ಐಟಿ ತನಿಖೆಯಿಂದ ಸತ್ಯ ಹೊರ ಬರುತ್ತಿದ್ದು, ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುವುದಾಗಿ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವಿರೇಂದ್ರ ಹೆಗ್ಗಡೆ ಹೇಳಿದ್ದಾರೆ. ಧರ್ಮಸ್ಥಳ ದೇಗುಲ ಬೇರೆ ಅಲ್ಲ, ಧರ್ಮಸ್ಥಳದ ಊರಿನವರು ಬೇರೆ ಅಲ್ಲ. ಎಷ್ಟು ನಿಷ್ಠುರವಾಗಿ ನಮ್ಮ ಮೇಲೆ ದಬ್ಬಾಳಿಕೆ ನಡೆದಿದೆ ಅಂತ ನೀವು ನೋಡಿದ್ದೀರಿ.
ನನ್ನ ಮೇಲೆ ಯಾಕೆ ಇಷ್ಟು ದ್ವೇಷ ಇದೆ ಎಂದು ಗೊತ್ತಾಗಿಲ್ಲ. ನಾವು ಯಾರನ್ನೂ ಹೀಯಾಳಿಸಿಲ್ಲ, ದ್ವೇಷ ಕೂಡ ಮಾಡಿಲ್ಲ. ಹೀಗಿದ್ದರೂ ಇಷ್ಟು ಶತ್ರುತ್ವ ಯಾಕೆ ಎಂಬುದು ಅರ್ಥವಾಗ್ತಿಲ್ಲ. ನಾವು ತಪ್ಪು ಮಾಡದ ಕಾರಣ ಆತ್ಮವಿಶ್ವಾಸವಿದ್ದು, ಮಂಜುನಾಥ ಸ್ವಾಮಿ ಮತ್ತು ಅಣ್ಣಪ್ಪ ಸ್ವಾಮಿಯೇ ಎಲ್ಲವನ್ನ ನೋಡಿಕೊಳ್ತಾರೆ ಎಂದು ವಿರೇಂದ್ರ ಹೆಗ್ಗಡೆ ಹೇಳಿದ್ದಾರೆ.


ಎಸ್ಐಟಿ ಮಾಡಿದ ಕಾರಣದಿಂದ ಎಲ್ಲಾ ಸತ್ಯ ಹೊರ ಬರುತ್ತಿದೆ. ಹಾಗಾಗಿ ರಾಜ್ಯ ಸರ್ಕಾರಕ್ಕೆ ನಾನು ಕೃತಜ್ಞತೆ ಸಲ್ಲಿಸುತ್ತಿದ್ದೇನೆ . ಸಿದ್ದಗಂಗಾ ಶ್ರೀಗಳು ಕೋವಿಡ್ ಪುಸ್ತಕಗಳನ್ನು ಓದುತ್ತಿದ್ದೇನೆ. ನಮ್ಮ ಸೇವೆ ಧರ್ಮ ನಮಗೆ ಮುಖ್ಯ ಅಂತಿದೆ. ತ್ರೀವಿವಿಧ ದಾಸೋಹಿ ಸಿದ್ದಗಂಗಾ ಶ್ರೀಗಳು ಹೇಳಿದ ಮಾತು ಇದಾಗಿದೆ. ಶತ್ರುತ್ವ ಯಾಕೆ ಬಂತು ಅಂತ ನಮಗೆ ಗೊತ್ತಿಲ್ಲ. ಎಷ್ಟು ಹಗೆತನ ಅಪವಾದ ಯಾಕೆ ಬಂತು ಅಂತ ನಮಗೆ ಗೊತ್ತಿಲ್ಲ. ನಾವು ಸೇವೆ ಮಾಡುತ್ತೇವೆ ಆದರೆ ಸೇವೆ ಪ್ರಚಾರದ ವಸ್ತುವಲ್ಲ ಇಷ್ಟು ವರ್ಷ ನಾವು ಆರೋಗ್ಯವಾಗಿರಲು ನಿಸ್ವಾರ್ಥ ಸೇವೆಯೇ ಕಾರಣ.

ನಮ್ಮ ಎಲ್ಲಾ ಕಾರ್ಯಕ್ರಮಗಳನ್ನು ನೀವೆಲ್ಲರೂ ಗಮನಿಸಿದ್ದೀರಿ. ನಾವು ಇಲ್ಲಿ ನಿಮಿತ್ತ ಮಾತ್ರ. ಮುಂದುವರೆಸಿಕೊಂಡು ಹೋಗಿದ್ದು ಇಲಾಖೆ ಕೆಲವರು ಪ್ರೀತಿಯಿಂದ ಟೀಕೆ ಮಾಡಿದರು. ಇವರ ಹಾಗೆ ಟೀಕೆ ಮಾಡಿಲ್ಲ. ನಿಮಗೆ ಎಷ್ಟು ಕೃತಜ್ಞತೆ ಸಲ್ಲಿಸಿದರು ಕಡಿಮೆಯೇ. ಧರ್ಮಸ್ಥಳ ಬೇರೆ ಅಲ್ಲ ಧರ್ಮಸ್ಥಳ ಊರಿನವರು ಬೇರೆ ಅಲ್ಲ. ನಮ್ಮ ಮೇಲೆ ಎಷ್ಟು ನಿಷ್ಠರವಾಗಿದ್ದ ಬಾಳಿಕೆಯಾಗಿದೆ ಎಂದು ನೋಡಿದ್ದೀರಿ. ನಮ್ಮ ಮೇಲೆ ಯಾಕೆ ಇಷ್ಟೊಂದು ದ್ವೇಷ ಅಂತ ನನಗೆ ಗೊತ್ತಾಗುತ್ತಿಲ್ಲ. ಈಗ ಮನಸ್ಸು ಸ್ವಲ್ಪ ಹಗುರವಾಗಿದೆ ಎತ್ತರದ ಬೆಟ್ಟದಿಂದ ನೀರು ಹರಿದಿದೆ ನಮ್ಮ ಮೇಲೆ ದೃಢವಾದ ನಂಬಿಕೆ ಎಲ್ಲರಿಗೂ ಆಭಾರಿಯಾಗಿರುವೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಹೇಳಿಕೆ ನೀಡಿದರು.