ಮಂಗಳೂರು: ಭಾರತ – ಪಾಕ್ ಯುದ್ಧದಲ್ಲಿ ಹೆಲಿಕಾಫ್ಟರ್‌ ನಿಂದ ಬಿದ್ದು ಜೀವನ್ಮರಣ ಹೋರಾಟದಲ್ಲಿ ಬದುಕಿ ಬಂದಿದ್ದ ವೀರ ಗರೊಡಿ ತಿಮ್ಮಪ್ಪ ಆಳ್ವ ನಿಧನ

0 0
Read Time:2 Minute, 1 Second

ಮಂಗಳೂರು: 1971 ರ ಭಾರತ ಪಾಕ್ ಯುದ್ಧದಲ್ಲಿ ಭಾಗವಹಿಸಿದ್ದ ಯುದ್ಧ ವೀರ ಗರೊಡಿ ತಿಮ್ಮಪ್ಪ ಆಳ್ವ(85) ಗುರುವಾರ ಸಂಜೆ ಮಂಗಳೂರಿನ ಲೋಹಿತ್ ನಗರದಲ್ಲಿನ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.

ಕುಟುಂಬಸ್ಥರು ಮೃತರ ದೇಹವನ್ನು ಶುಕ್ರವಾರ ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ದಾನ ಮಾಡಲಾಗುವುದು ಕುಟುಂಬಸ್ಥರು ತಿಳಿಸಿದ್ದಾರೆ.ಇತ್ತೀಚೆಗೆ ಅವರ ಅನುಭವ ಕಥನ ಗರೋಡಿ ಮನೆಯಿಂದ ಸೇನಾ ಗರಡಿಗೆ ಪ್ರಕಟವಾಗಿತ್ತು. ತುಳುನಾಡಿನ ಕ್ರಷಿ ಕುಟುಂಬವೊಂದರಲ್ಲಿ ಜನಿಸಿದ ಯುವಕ ದೇಶಕಾಯುವ ಸೈನಿಕನಾಗಿ 1971ರ ಯುದ್ಧದಲ್ಲಿ ಹೆಲಿಕಾಫ್ಟರ್ ನಲ್ಲಿ ಯುದ್ಧ ಶಿಬಿರಕ್ಕೆ ಪ್ರಯಾಣಿಸುವ ವೇಳೆ ಪಾಕ್ ಸೈನಿಕರ ಫಿರಂಗಿ ದಾಳಿಗೆ ತುತ್ತಾಗಿ ಚಿತ್ತಗಾಂಗ್ ಪ್ರದೇಶದ ಕಾಡಿನಲ್ಲಿ ಬಿದ್ದು ಜೀವನ್ಮರಣ ಹೋರಾಟ ನಡೆಸಿ ಬದುಕಿ ಉಳಿದ ಅನುಭವ ಕಥನ ಕಿರು ಪುಸ್ತಕವಾಗಿ ಪ್ರಕಟವಾಗಿದೆ.1971ರ ಭಾರತ -ಪಾಕ್ ಯುದ್ಧದಲ್ಲಿ, ಭಾರತ ಜಗತ್ತು ಬೆರಗಾಗುವ ರೀತಿಯಲ್ಲಿ ಜಯ ಗಳಿಸಿತು. ದೇಶದ ಅಂದಿನ ಪ್ರಧಾನಿ ಇಂದಿರಾಗಾಂಧಿಯವರ ದಿಟ್ಟ ನಿರ್ಧಾರ, ಅಂತಾರಾಷ್ಟ್ರೀಯ ಸಂಬಂಧಗಳನ್ನು ನಿಭಾಯಿಸಿದ ಚಾಣಾಕ್ಷತೆ, ಸೇನಾ ದಂಡನಾಯಕ ಮಾಣಿಕ್ ಶಾ ರೂಪಿಸಿದ ಯುದ್ಧ ತಂತ್ರ ಜೊತೆಗೆ ಸಾವಿರಾರು ಭಾರತೀಯ ಸೇನಾ ಜವಾನರ ಬಲಿದಾನದಿಂದ ವಿಶ್ವದ ಎದುರು ಪ್ರಜಾಪ್ರಭುತ್ವ ಭಾರತ ದೇಶ ತನ್ನ ಅಂತಾರಾಷ್ಟ್ರೀಯ ಬದ್ದತೆ ಮತ್ತು ನಾಯಕತ್ವವನ್ನು ಸ್ಪಷ್ಟಪಡಿಸಲು ಸಾಧ್ಯಮಾಡಿಸಿದ ಯುದ್ಧ ಅದು. ಪಾಕ್ ವಿರುದ್ಧದ ಮೂರೂ ಯುದ್ಧದಲ್ಲಿ ಭಾಗವಹಿಸಿದ್ದ ಹಿರಿಮೆ ಜಿ ಟಿ ಆಳ್ವರದ್ದು.

Happy
Happy
50 %
Sad
Sad
50 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *