
Read Time:44 Second
ಮಂಗಳೂರು: ಈಗಾಗಲೇ ಪ್ರಕರಣದಲ್ಲಿ ಭಾಗಿಯಾದವರ ಜತೆ ಯಾವುದೇ ಪ್ರಕರಣ ಇಲ್ಲದವರು ತಿರುಗಾಡದಂತೆ ಈಗಾಗಲೇ ನಾವು ಎಚ್ಚರಿಕೆ ನೀಡಿದ್ದೇವೆ. ಸರಿಯಾಗಿ ಕೇಳಿಸಿದಂತೆ ಕಾಣುತ್ತಿಲ್ಲ.


ಈಗಾಗಲೇ ಅಪರಾಧ ಪ್ರಕರಣಗಳಲ್ಲಿ ಭಾಗಿಯಾದವರ ಜತೆ ತಿರುಗಾಡುವವರಿಗೂ ತೊಂದರೆ ಆಗಲಿದೆ. ಇಲ್ಲ ನಾವು ತಿರುಗುತ್ತೇವೆ. ನಮ್ಮ ಇಷ್ಟ ಎಂದು ನೀವು ಬಯಸಿದರೆ ನಮಗೆ ಸಮಸ್ಯೆ ಇಲ್ಲ.
ನೀವು ಮಾಡುವುದು ನೀವು ಮಾಡಿ, ನಾವು ಮಾಡುವುದು ನಾವು ಮಾಡುತ್ತೇವೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಎಚ್ಚರಿಕೆ ನೀಡಿದ್ದಾರೆ.



