
Read Time:1 Minute, 18 Second
ನವದೆಹಲಿ :ಪ್ರಧಾನಿ ನರೇಂದ್ರ ಮೋದಿ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ ಇಂದು ಬೆಳಗ್ಗೆ ದೆಹಲಿಯಲ್ಲಿರುವ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸಮಾಧಿಗೆ ನಮನ ಸಲ್ಲಿಸಿದ್ದಾರೆ.


293ಸ್ಥಾನ ಗೆದ್ದಿರುವ ಬಿಜೆಪಿ ನೇತೃತ್ವದ ಎನ್ ಡಿಎ ಕೂಟದ ಕೇಂದ್ರ ಸರ್ಕಾರ ಇಂದಿನಿಂದ ಅಸ್ವಿತ್ವಕ್ಕೆ ಬರಲಿದೆ.
ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಅವರ ಮಂತ್ರಿ ಮಂಡಲದ ಸದಸ್ಯರು ಇಂದು ಸಂಜೆ 7.15 ಕ್ಕೆ ರಾಷ್ಟ್ರಪತಿ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಭಾನುವಾರ ಸಂಜೆ ಭಾರತದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಬಾರಿ ಬಿಜೆಪಿಗೆ ಬಹುಮತವಿಲ್ಲದ ಕಾರಣ ಮತ್ತು ಅದು ಮೈತ್ರಿಕೂಟದ ಬಹುಮತದೊಂದಿಗೆ ಸರ್ಕಾರ ರಚಿಸುತ್ತಿರುವುದರಿಂದ, ಈ ಸರ್ಕಾರದಲ್ಲಿ ಮಿತ್ರಪಕ್ಷಗಳ ಸಂಖ್ಯೆ ಹೆಚ್ಚಾಗುತ್ತದೆ, ಮಂತ್ರಿಮಂಡಲದ ಗಾತ್ರವೂ ಹಿಂದಿನ ಎರಡು ಬಾರಿಗಿಂತ ದೊಡ್ಡದಾಗಿರುತ್ತದೆ.

