
Read Time:1 Minute, 0 Second
ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಆರೋಪದಲ್ಲಿ ಕಾರ್ಕಳ ಮಿಯಾರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕನನ್ನು ಸೇವೆಯಿಂದ ವಜಾಗೊಳಿಸಲಾಗಿದೆ.


ಕಲಬುರಗಿ ನಿವಾಸಿ ಮದರಸ್ ಎಸ್ ಮಕಾಂದರ್ ವಜಾಗೊಂಡ ದೈಹಿಕ ಶಿಕ್ಷಣ ಶಿಕ್ಷಕ. ಈತ 2005ರಲ್ಲಿ ದೈಹಿಕ ಶಿಕ್ಷಣ ಶಿಕ್ಷಕನಾಗಿ ಸೇವೆಗೆ ಸೇರ್ಪಡೆಗೊಂಡಿದ್ದ. ಧಾರ್ಮಿಕ ಭಾವನೆಗೆ ಧಕ್ಕೆ ತರುವಂತೆ ಈತ ವಿದ್ಯಾರ್ಥಿಗಳ ಜನಿವಾರ ತೆಗೆಸುವುದು, ಕೈಗೆ ಕಟ್ಟಿದ ದಾರ ತುಂಡರಿಸುತ್ತಿದ್ದ. ಅಲ್ಲದೆ ವಿದ್ಯಾರ್ಥಿಗಳಿಗೆ ಶಿಕ್ಷೆ ನೀಡುತ್ತಿದ್ದ.
ಶಾಲೆಗೆ ಆಗಮಿಸಿದ್ದ ಪೋಷಕರು ಈತನನ್ನು ತರಾಟೆಗೆ ತೆಗೆದುಕೊಂಡಿದ್ದರು. ಇದೀಗ ಶಾಲಾ ಪ್ರಾಂಶುಪಾಲರು ಈತನನ್ನು ಸೇವೆಯಿಂದ ವಜಾಗೊಳಿಸಿದ್ದಾರೆ.


