ಮಹಿಳೆಯರಿಗೆ ಈ ಯೋಜನೆಯಡಿ ಸಿಗಲಿದೆ ಉಚಿತ ಹೊಲಿಗೆ ಯಂತ್ರ.!

0 0
Read Time:3 Minute, 25 Second

 ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನ ಹೊಲಿಗೆ ಯಂತ್ರ ವಿತರಣಾ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ ಹಾಗೂ ಈ ಯೋಜನೆಯಡಿ ಸೌಲಭ್ಯವನ್ನು ಪಡೆಯಲು ಇಚ್ಚಿಸುವವರು ಕಡ್ಡಾಯವಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿರುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 06.12.2025 ರಂದು ಸಾಯಂಕಾಲ: 5.30 ಗಂಟೆಯವರೆಗೆ ನಿಗಧಿ ಪಡಿಸಿದೆ.

ಅರ್ಜಿ ಸಲ್ಲಿಸಲು ಇರಬೇಕಾದ ಸಾಮಾನ್ಯ ಅರ್ಹತೆಗಳು:-

1) ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ (ನಿ.) ದ ವತಿಯಿಂದ ಈ ಯೋಜನೆಗೆ ಅರ್ಜಿ ಸಲ್ಲಿಸಲು ಪ್ರವರ್ಗ-3-ಬಿ ಅಡಿಯಲ್ಲಿ 2(ಎ) ಯಿಂದ 2(ಎಫ್)ವರೆಗೆ ಬರುವ ಸಮುದಾಯಕ್ಕೆ ಸೇರಿರಬೇಕು.

2) ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-3ಬಿ ಯಲ್ಲಿ ಪಡೆದಿರಬೇಕು (ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು),

3) ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು ಹಾಗೂ ಆಧಾರ್ ಕಾರ್ಡ್ ಹೊಂದಿರಬೇಕು.

4) ಅರ್ಜಿದಾರರ ವಯಸ್ಸು ಕನಿಷ್ಠ 18 ವರ್ಷಗಳು ಹಾಗೂ ಗರಿಷ್ಠ 55 ವರ್ಷಗಳನ್ನು ಮೀರಿರತಕ್ಕದ್ದಲ್ಲ.

5) ಒಂದು ಕುಟುಂಬದಲ್ಲಿ ಓರ್ವ ಸದಸ್ಯರನ್ನು ಮಾತ್ರ ಈ ಸೌಲಭ್ಯಕ್ಕೆ ಪರಿಗಣಿಸತಕ್ಕದ್ದು.

6) ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನವು ಗ್ರಾಮೀಣ ಪ್ರದೇಶದಲ್ಲಿ ರೂ.98.000/- ಹಾಗೂ ನಗರ ಪ್ರದೇಶದಲ್ಲಿ ರೂ. 1,20.000/-ಗಳನ್ನು ಮೀರತಕ್ಕದ್ದಲ್ಲ.

7) ಅಂಗವಿಕಲ ಮಹಿಳೆಯರಿಗೆ ಶೇ.5 ರಷ್ಟು ಮೀಸಲಿರಿಸತಕ್ಕದ್ದು.

8) ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33 ರಷ್ಟು, ವಿಕಲಚೇತನರಿಗೆ ಶೇ.5 ರಷ್ಟು ಹಾಗೂ ತೃತೀಯ ಲಿಂಗಗಳಿಗೆ ಶೇ.1 ರಷ್ಟು ಅಂಗವಿಕಲ ಮಹಿಳೆಯರಿಗೆ ಶೇ.2 ರಷ್ಟನ್ನು ಮೀಸಲಿರಿಸುವುದು.

9) ವಿಧವೆಯರಿಗೆ, ಪರಿತ್ಯಕ್ತ ಮಹಿಳೆಯರಿಗೆ ಹೆಚ್.ಐ.ವಿ ಪೀಡಿತರಿಗೆ 35 ವರ್ಷ ವಯೋಮಿತಿ ಮೀರಿರತಕ್ಕ ಅವಿವಾಹಿತ ಮಹಿಳೆಯರಿಗೆ ಶೇ.2 ರಷ್ಟನ್ನು ಮೀಸಲಿರಿಸುವುದು.

ವಿಶೇಷ ಸೂಚನೆ:-

+ ಈ ಯೋಜನೆಗೆ ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾಕೇಂದ್ರಗಳಲ್ಲಿ ಆನ್ಲೈನ್ ಮೂಲಕವೇ ಸಲ್ಲಿಸಬೇಕಾಗಿರುತ್ತದೆ.

← ನಿರ್ದೇಶಕರ ಮಂಡಳಿಯ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯಬಯಸುವವರೂ ಸಹ ಆನ್ಲೈನ್ನಲ್ಲಿ ಪ್ರತ್ಯೇಕವಾಗಿ ಅರ್ಜಿಯನ್ನು ಸಲ್ಲಿಸುವುದು, ಒಂದು ಕುಟುಂಬದ ಒಬ್ಬ ಸದಸ್ಯರು ಮಾತ್ರ ಈ ಯೋಜನೆಯಲ್ಲಿ ಒಂದು ಸಲ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಬಹುದು.

ಸಂಪರ್ಕ ವಿವರ: ನಿಗಮದ ಸಹಾಯವಾಣಿ: 8867537799/ ದೂ.ಸಂ: 080-29903994
(ಬೆಳಿಗ್ಗೆ: 10.00 ರಿಂದ ಸಂಜೆ: 5.30 ವರೆಗೆ ಸಂಪರ್ಕಿಸಬಹುದಾಗಿದೆ).

ಯೋಜನೆಗಳ ಮಾರ್ಗಸೂಚಿಗಳು, ಸಲ್ಲಿಸಬೇಕಾದ ದಾಖಲೆಗಳು, ಜಿಲ್ಲಾ ವ್ಯವಸ್ಥಾಪಕರ ಕಛೇರಿ ವಿಳಾಸಗಳನ್ನು ಹಾಗೂ ಹೆಚ್ಚಿನ ವಿವರಗಳನ್ನು https://kmcdc.karnataka.gov.in ಇಲ್ಲಿ ತಿಳಿಯಬಹುದಾಗಿದೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *