
Read Time:1 Minute, 11 Second
ಬೆಳ್ತಂಗಡಿ: ಬಾಲಕಿಯ ಮೇಲೆ ನಿರಂತರ ಅತ್ಯಾಚಾರ ನಡೆಸಿ ಅಪ್ರಾಪ್ತೆಯನ್ನು ಗರ್ಭಿಣಿಯಾಗಿಸಿದ ಬಗ್ಗೆ ಬಾಲಕಿ ನೀಡಿದ ದೂರಿನಂತೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



ಅಮ್ಜತ್ ಖಾನ್ (18) ಪ್ರಕರಣದ ಆರೋಪಿ. 16ರ ಹರೆಯದ ಬಾಲಕಿ ವೇಣೂರು ಸನಿಹದ ಸಂಬಂಧಿಕರ ಮನೆಗೆ ಬಂದಿದ್ದಾಳೆ. ಈ ವೇಳೆ ಅತ್ತೆಯ ಮಗ ಮನೆಯಲ್ಲಿ ಯಾರೂ ಇಲ್ಲದ ವೇಳೆ ಒತ್ತಾಯಪೂರ್ವಕವಾಗಿ ಲೈಂಗಿಕ ಸಂಪರ್ಕಮಾಡಿದ್ದಾನೆ. ಇದಾದ ಬಳಿಕ ಬಾಲಕಿಯನ್ನು ಪ್ರೀತಿಸಿ, ಮದುವೆಯಾಗುವುದಾಗಿ ಹೇಳಿ ಕದ್ದುಮುಚ್ಚಿ ನಿರಂತರ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದ ಎನ್ನಲಾಗಿದೆ. ಬಾಲಕಿ ಅನಾರೋಗ್ಯದ ಕಾರಣ ವೇಣೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತೆರಳಿದ್ದು, ಬಾಲಕಿ ಗರ್ಭಿಣಿಯಾಗಿರುವ ವಿಚಾರ ಬೆಳಕಿಗೆ ಬಂದಿದೆ. ಈ ಬಗ್ಗೆ ಬಾಲಕಿ ಪೊಲೀಸರಿಗೆ ದೂರು ನೀಡಿದ್ದು, ಆರೋಪಿ ವಿರುದ್ಧ ಕೇಸು ದಾಖಲಾಗಿದೆ.

