
Read Time:48 Second
ಮಣಿಪಾಲದ ಮಾಹೆ ಯೂನಿವರ್ಸಿಟಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.


ದೃಷ್ಟಿ ರಾಣಿ(24) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಈಕೆ ಮಾಹೆ ಯೂನಿವರ್ಸಿಟಿಯಲ್ಲಿ ಮೊದಲ ವರ್ಷದ ಎಂಎಸ್ಸಿ ಪೊರೆನ್ಸಿಕ್ ಸೈನ್ಸ್ ವಿಭಾಗದಲ್ಲಿ ವಿದ್ಯಾಭ್ಯಾಸ ಮಾಡಿಕೊಂಡಿದ್ದಳು.
ನ. 30ರಂದು ರಾತ್ರಿ ಶಾರದಾ ಹಾಸ್ಟೆಲ್ ನ ರೂಮಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸ್ಥಳಕ್ಕೆ ಮಣಿಪಾಲ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


