
ಗೋವಾದ ಅರ್ಪೋರಾದ ರೋಮಿಯೋ ಲೇನ್‌ನಲ್ಲಿರುವ ನೈಟ್ ಕ್ಲಬ್‌ನಲ್ಲಿ ತಡರಾತ್ರಿ ಅಗ್ನಿ ದುರಂತ ಸಂಭವಿಸಿ, 23 ಪ್ರವಾಸಿಗರು ದಾರುಣ ಮೃತಪಟ್ಟಿದ್ದಾರೆ.



ಫೇಮಸ್ ನೈಟ್‌ಕ್ಲಬ್ ಬಿರ್ಚ್‌ನಲ್ಲಿ ಘಟನೆ ನಡೆದಿದ್ದು, ಸುಮಾರು 50 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನ ಗೋವಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ತಡರಾತ್ರಿ 1 ಗಂಟೆ ಸುಮಾರಿಗೆ ಕ್ಲಬ್ ಮುಚ್ಚಲು ಎಲ್ಲಾ ಸಿದ್ಧತೆ ಮಾಡಿಕೊಳ್ಳುತ್ತಿದ್ದರು. ಅಷ್ಟರಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಅಡುಗೆ ಮನೆಯ ಬಳಿ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಬೆಂಕಿ ಕಾಣಿಸಿಕೊಂಡಿರುವ ಶಂಕೆಯಿದೆ. ಸ್ಫೋಟದ ತೀವ್ರತೆಗೆ ಕೆಲವೇ ಸೆಕೆಂಡುಗಳಲ್ಲಿ ಇಡೀ ಕಟ್ಟಡಕ್ಕೆ ಬೆಂಕಿ ಹರಡಿದೆ. ಕ್ಲಬ್‌ನ ಒಳಗಿದ್ದವರಿಗೆ ತಪ್ಪಿಸಿಕೊಳ್ಳಲು ಸಮಯಾವಕಾಶವಿತ್ತು. ಆದಾಗ್ಯೂ ದುರಂತ ಸಂಭವಿಸಿದೆ. ಮೇಲ್ನೋಟಕ್ಕೆ ಸಿಲಿಂಡರ್ ಸ್ಫೋಟಗೊಂಡಿರುವ ಶಂಕೆ ವ್ಯಕ್ತವಾಗಿದೆ. ಆದ್ರೆ ನಿಖರ ಕಾರಣ ಇನ್ನಷ್ಟೇ ತಿಳಿಯಬೇಕು. ಶವಗಳನ್ನ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಅಗ್ನಿ ದುರಂತ ನೆನೆದು, ಪ್ರಧಾನಿ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಗೋವಾ ಸಿಎಂ ಪ್ರಮೋದ್ ಸಾವಂತ್ ಸಂತಾಪ ಸೂಚಿಸಿದ್ದಾರೆ.

