
ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 16866 ಡ್ರಗ್ಸ್ ಪ್ರಕರಣಗಳು ದಾಖಲಾಗಿದ್ದು, ಇವುಗಳ ಪೈಕಿ 8133 ಮಂದಿ ಡ್ರಗ್ ಪೆಡ್ಲರ್ ಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾಹಿತಿ ನೀಡಿದ್ದಾರೆ.



ರಾಜ್ಯದಲ್ಲಿ ಕಳೆದ 3 ವರ್ಷಗಳಿಂದ ದಾಖಲಾಗಿರುವ ಡ್ರಗ್ಸ್ ಮತ್ತು ಗಾಂಜಾ ಪ್ರಕರಣಗಳ ಸಂಖ್ಯೆ ಎಷ್ಟು? ಈ ಪೈಕಿ ಎಷ್ಟು ಪೆಡ್ಡರ್ಗಳನ್ನು ಬಂಧಿಸಲಾಗಿದೆ? ಅವರ ವಿರುದ್ಧ ಕೈಗೊಂಡ ಕ್ರಮಗಳೇನು? ಎಷ್ಟು ಪ್ರಮಾಣದ ಮಾದಕದ್ರವ್ಯವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವಿಧಾನಸಭೆಯಲ್ಲಿ ಅಬ್ಬಯ್ಯಪ್ರಸಾದ್ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವ ಪರಮೇಶ್ವರ್, ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 16866 ಡ್ರಗ್ಸ್ ಪ್ರಕರಣಗಳು ದಾಖಲಾಗಿದ್ದು, ಇವುಗಳ ಪೈಕಿ 8133 ಮಂದಿ ಡ್ರಗ್ ಪೆಡ್ಲರ್ ಗಳನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.
2023 ರಿಂದ 2025 ರವರೆಗೆ ಒಟ್ಟು 16866 ಪ್ರಕರಣಗಳನ್ನು ದಾಖಲಿಸಿ, 8133 ಪೆಡ್ಡರ್ಗಳನ್ನು ಬಂಧಿಸಿ ಆರೋಪಿಗಳ ವಿರುದ್ಧ ಎನ್.ಡಿ.ಪಿ.ಎಸ್ ಕಾಯ್ದೆ-1985ರಡಿಯಲ್ಲಿ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿ, ಕಾನೂನು ರೀತ್ಯ ಕ್ರಮಕೈಗೊಳ್ಳಲಾಗುತ್ತಿದೆ.



