
Read Time:1 Minute, 18 Second
ಧರ್ಮಸ್ಥಳ ಪ್ರಕರಣದ ಪ್ರಮುಖ ಆರೋಪಿ ಚಿನ್ನಯ್ಯ ಶಿವಮೊಗ್ಗದ ಸೋಗಾನೆ ಬಳಿ ಇರುವ ಕೇಂದ್ರ ಕಾರಾಗೃಹದಿಂದ ಬಿಡುಗಡೆಗೊಂಡಿದ್ದಾನೆ.



ಜಾಮೀನು ಸಿಕ್ಕಿದ 24 ದಿನಗಳ ಬಳಿಕ ಚಿನ್ನಯ್ಯನಿಗೆ ಬಿಡುಗಡೆ ಭಾಗ್ಯ ಸಿಕ್ಕಿದೆ. ನವೆಂಬರ್ 24ರಂದು ಬೆಳ್ತಂಗಡಿ ನ್ಯಾಯಾಲಯ 12 ಷರತ್ತುಗಳನ್ನು ವಿಧಿಸಿ ಒಂದು ಲಕ್ಷ ಬಾಂಡ್ ಇಬ್ಬರು ಸ್ಥಳೀಯ ಶ್ಯೂರಿಟಿ ಪಡೆಯಬೇಕು ಎಂದು ಜಾಮೀನು ಮಂಜೂರು ಮಾಡಿತ್ತು.
ಆದರೆ ಜಾಮೀನು ಮಂಜೂರಾಗಿ 24 ದಿನ ಕಳೆದರೂ ಜಾಮೀನು ನೀಡಲು ಯಾರೂ ಮುಂದೆ ಬಾರದ ಕಾರಣ ಬಿಡುಗಡೆ ಭಾಗ್ಯ ಸಿಕ್ಕಿರಲಿಲ್ಲ. ಇಂದು ಬೆಳಗ್ಗೆ ಶಿವಮೊಗ್ಗದ ಸೋಗಾನೆ ಬಳಿ ಇರುವ ಕೇಂದ್ರ ಕಾರಾಗೃಹಕ್ಕೆ ಇನ್ನೋವಾ ಕಾರಿನಲ್ಲಿ ಚಿನ್ನಯ್ಯನ ಪತ್ನಿ ಮಲ್ಲಿಕಾ ಸೇರಿದಂತೆ ಐದು ಜನರು ಆಗಮಿಸಿದ್ದರು.


ಶಿವಮೊಗ್ಗ ಕಾರಾಗೃಹದಲ್ಲಿ ಒಂದು ಗಂಟೆಗೂ ಅಧಿಕ ಕಾಲ ಬಿಡುಗಡೆ ಪ್ರಕ್ರಿಯೆ ನಡೆಯಿತು. ಬೆಳಗ್ಗೆ 8.30ರ ವೇಳೆಗೆ ಚಿನ್ನಯ್ಯನನ್ನು ಶಿವಮೊಗ್ಗ ಕಾರಾಗೃಹದಿಂದ ಬಿಡುಗಡೆ ಮಾಡಲಾಗಿದೆ.


