ಹಾಲಿನ ಪ್ರೋತ್ಸಾಹ ಧನ 7 ರೂ. ಹೆಚ್ಚಳ..!

0 0
Read Time:1 Minute, 15 Second

ರಾಜ್ಯದ ರೈತರಿಗೆ ಸಿಎಂ ಸಿದ್ದರಾಮಯ್ಯ ಸಿಹಿ ಸುದ್ದಿ ಒಂದನ್ನು ನೀಡಿದ್ದು ಇಷ್ಟು ದಿನ ಪ್ರತಿ ಲೀಟರ್ಗೆ ಐದು ರೂಪಾಯಿ ಪ್ರೋತ್ಸಾಹ ಧನ ನೀಡಲಾಗುತ್ತಿತ್ತು. ಬೆಳಗಾವಿ ಅಧಿವೇಶನದಲ್ಲಿ ರೈತರ ಹಿತ ದೃಷ್ಟಿಯಿಂದ ರೈತರಿಗೆ ನೀಡುತ್ತಿದ್ದ ಐದು ರೂಪಾಯಿ ಪ್ರೋತ್ಸಾಹ ಧನವನ್ನು 7 ರೂಪಾಯಿಗೆ ಹೆಚ್ಚಿಸಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು.

ಪ್ರಸ್ತುತ ಪ್ರೋತ್ಸಾಹಧನವು ರೈತರಿಗೆ ಸಂಪೂರ್ಣವಾಗಿ ತಲುಪುತ್ತಿಲ್ಲ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಬೆಲೆ ಏರಿಕೆ ಹೊರತಾಗಿಯೂ ಸರ್ಕಾರದಿಂದ ನೆರವು ಮುಂದುವರಿಯುತ್ತದೆ ಎಂದರು. ತಮ್ಮ ಸರ್ಕಾರದ ಹಿಂದಿನ ಅವಧಿಯ (2013-18) ಪ್ರಣಾಳಿಕೆ ಭರವಸೆಗಳನ್ನು ಪ್ರಸ್ತಾಪಿಸಿದ ಸಿದ್ದರಾಮಯ್ಯ, 165 ಭರವಸೆಗಳ ಪೈಕಿ 158 ಭರವಸೆಗಳನ್ನು ಈಡೇರಿಸಲಾಗಿದೆ ಎಂದು ಸ್ಪಷ್ಟಪಡಿಸಿದರು. ಇದರ ಜೊತೆಗೆ ಬಜೆಟ್‌ನಲ್ಲಿ ಘೋಷಿಸದೆ 30 ಹೊಸ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ ಎಂದರು.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *