
ಮಂಗಳೂರು: ಜ. 4, 2026ರಂದು ಮಂಗಳೂರಿನ ಕುದ್ಮುಲ್ ರಂಗರಾವ್, ಪುರಭವನದಲ್ಲಿ ನಡೆಯಲಿರುವ ಕುಂಭ ಕಲಾವಳಿ ಕುಲಾಲ ಕಲಾ ಸೇವಾಂಜಲಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಉಳ್ಳಾಲ ಜನಪ್ರಿಯ ಶಾಸಕರು, ರಾಜ್ಯ ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್ ಅವರನ್ನು ಸಮಿತಿ ಪದಾಧಿಕಾರಿಗಳು ಭೇಟಿಯಾಗಿ ಆಹ್ವಾನ ನೀಡಿದರು.




ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ (ರಿ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಹಾಗೂ ದಾಸ್ ಚಾರಿಟೇಬಲ್ ಸೇವಾ ಟ್ರಸ್ಟ್ (ರಿ) ಮಂಗಳೂರು ಇದರ ಸಹಯೋಗದಲ್ಲಿ “ಕುಂಭಕಲಾವಳಿ ಕುಲಾಲ ಕಲಾ ಸೇವಾಂಜಲಿ” ಕಾಯ೯ಕ್ರಮ ಮಂಗಳೂರಿನ ಕುದ್ಮುಲ್ ರಂಗರಾವ್, ಪುರಭವನದಲ್ಲಿ ಜ. 04ರಂದು ನಡೆಯಲಿದೆ.
ಬೆಳಿಗ್ಗೆ 09 ಗಂಟೆಗೆ ಪದಗ್ರಹಣ ನಡೆಯಲಿದ್ದು, ಬಳಿಕ ಮಧ್ಯಾಹ್ನ 12.00 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದೆ. ನಡುಬೊಟ್ಟು ಶ್ರೀ ಉದ್ಭವ ರೌದ್ರನಾಥೇಶ್ವರ ದೇವಸ್ಥಾನದ ಧಮ೯ದಶಿ೯ ಡಾ. ರವಿ.ಎನ್ ದೀಪ ಪ್ರಜ್ವಲಿಸಿ ಈ ಕಾರ್ಯಕ್ರಮ ಉದ್ಘಾಟಿಸಲಿದ್ದು ಮುಳಿಯ ಶ್ರೀ ವೈಷ್ಣವಿ ಕ್ಷೇತ್ರದ ಶ್ರೀ ಶ್ರೀ ಶಿವಾನಂದ ಸರಸ್ವತೀ ಸ್ವಾಮೀಜಿ ದಿವ್ಯ ಉಪಸ್ಥಿತಿವಹಿಸಲಿದ್ದಾರೆ. ಶ್ರೀ ಧಾಮ ಮಾಣಿಲ, ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಶ್ರೀಶ್ರೀಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮೈಸೂರು ಸಂಸ್ಥಾನದ ಮಹಾರಾಜರಾದ ಶ್ರೀ ಯಧುವೀರ್ ಒಡೆಯರ್, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭಾಗವಹಿಸಲಿದ್ದಾರೆ



