
Read Time:58 Second
ಮಂಗಳೂರು: 2026ರ ಜ. 4ರಂದು ಮಂಗಳೂರಿನ ಪುರಭವನದಲ್ಲಿ ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ ಜಿಲ್ಲಾ ಸಮಿತಿ ಹಾಗೂ ದಾಸ್ ಚಾರಿಟೇಬಲ್ ಸೇವಾ ಟ್ರಸ್ಟ್ (ರಿ.) ಸಹಯೋಗದಲ್ಲಿ ನಡೆಯಲಿರುವ ಕುಂಭ ಕಲಾವಳಿ ಕುಲಾಲ ಕಲಾ ಸೇವಾಂಜಲಿ ಕಾರ್ಯಕ್ರಮಕ್ಕೆ ಬಿಜೆಪಿ ಕಛೇರಿಗೆ ಭೇಟಿ ನೀಡಿ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸೇರಿದಂತೆ ಶಾಸಕ ಭರತ್ ಶೆಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಬೊಟ್ಯಾಡಿ, ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ ಹಾಗೂ ಮುಂತಾದ ಅನೇಕ ಗಣ್ಯರಿಗೆ ಸಮಿತಿ ಪದಾಧಿಕಾರಿಗಳು ಭೇಟಿಯಾಗಿ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ ನೀಡಿದರು.








