ಡ್ರಗ್ಸ್‌ ಫ್ಯಾಕ್ಟರಿ ಪತ್ತೆ : 55.88 ಕೋಟಿ ರೂ. ಮೌಲ್ಯದ ಮಾದಕವಸ್ತು ವಶ

0 0
Read Time:2 Minute, 54 Second

ಬೆಂಗಳೂರು: ಮಹಾರಾಷ್ಟ್ರದ ಕೊಂಕಣ ವಿಭಾಗದ ಪೊಲೀಸರು ಬೆಂಗಳೂರಲ್ಲಿ ವಿವಿಧೆಡೆ ದಾಳಿ ನಡೆಸಿ 55.88 ಕೋಟಿ ರೂ. ಮೌಲ್ಯದ ಡ್ರಗ್ಸ್​ ವಶಪಡಿಸಿಕೊಂಡಿದ್ದು, ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಿದ್ದಾರೆ. ಆರ್‌ಜೆ ಇವೆಂಟ್ ಹೆಸರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ ನಡೆಸುತ್ತಿರುವುದು ಪತ್ತೆಯಾಗಿದ್ದು, ಬೆಂಗಳೂರಿಗರನ್ನು ಬೆಚ್ಚಿ ಬೀಳಿಸಿದೆ.

ಮುಂಬೈನಲ್ಲಿ ಇತ್ತೀಚೆಗೆ 1.5 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿತ್ತು. ಈ ವೇಳೆ ಅರೆಸ್ಟ್​​ ಆಗಿದ್ದ ಅಬ್ದುಲ್ಲ ಖಾದರ್ ಶೇಕ್ ಎಂಬಾತ ವಿಚಾರಣೆ ವೇಳೆ ಹಲವು ವಿಷಯ ಬಾಯ್ಬಿಟ್ಟಿದ್ದ. ಇದರ ಅನ್ವಯ ಬೆಳಗಾವಿ ಮೂಲದ ಪ್ರಶಾಂತ್ ಯಲ್ಲಪ್ಪ ಪಾಟೀಲ್ ಎಂಬಾತನನ್ನು ಬಂಧಿಲಾಗಿತ್ತು. ಪಾಟೀಲ್ ಮಾಹಿತಿ ಮೇರೆಗೆ ಬೆಂಗಳೂರಿನ ಮೂರು ಕಡೆ ಮಹಾರಾಷ್ಟ್ರ ಪೊಲೀಸರು ದಾಳಿ ನಡೆಸಿದ್ದಾರೆ. ಹೊರಮಾವು, ಯರಪ್ಪನಹಳ್ಳಿ, ಕಣ್ಣೂರು ಬಳಿ ಡ್ರಗ್ಸ್ ಫ್ಯಾಕ್ಟರಿ ನಡೆಸುತ್ತಿರುವುದು ಪತ್ತೆಯಾಗಿದೆ.

ದಾಳಿ ವೇಳೆ 4.1 ಕೆಜಿ ಘನ MDMA ಮತ್ತು 17 ಕೆಜಿ ದ್ರವ MDMA ಸೇರಿ 55.88 ಕೋಟಿ ರೂ. ಮೌಲ್ಯದ ಒಟ್ಟು 21.4 ಕೆಜಿ‌ ಡ್ರಗ್ಸ್​​ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಜಸ್ಥಾನ ಮೂಲದ ಸೂರಜ್ ರಮೇಶ್ ಯಾದವ್, ಮಲ್ಖಾನ್ ರಾಮಲಾಲ್ ಬಿಷ್ಣೋಯ್ ಸೇರಿದಂತೆ ನಾಲ್ವರನ್ನುಜ ಬಂಧಿಸಲಾಗಿದೆ. ಈ ಫ್ಯಾಕ್ಟರಿಗಳಿಂದ ದೇಶದ ಅನೇಕ ರಾಜ್ಯಗಳಿಗೆ ಡ್ರಗ್ಸ್ ಸಪ್ಲೈ ಮಾಡುತ್ತಿರುವ ಶಂಕೆ ವ್ಯಕ್ತವಾಗಿದ್ದು, ಮಹಾರಾಷ್ಟ್ರ ಪೊಲೀಸರು ಬಂಧಿತರನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಬಾಗಲೂರು ಪೊಲೀಸ್ ಠಾಣೆ ಮಿತಿಯೊಳಗಿನ ಸ್ಪಂದನ ಲೇಔಟ್ ಕಾಲೋನಿ, ಕೊತ್ತನೂರು ಪೊಲೀಸ್ ಠಾಣೆ ಮಿತಿಯೊಳಗಿನ ಎನ್.ಜಿ. ಗೋಲ್ಲಹಳ್ಳಿ ಪ್ರದೇಶದಲ್ಲಿ ಆರ್.ಜೆ. ಈವೆಂಟ್ ಎಂಬ ಹೆಸರಿನ ಕಾರ್ಖಾನೆ, ಅವಲಹಳ್ಳಿ ಪೊಲೀಸ್ ಠಾಣೆ ಮಿತಿಯೊಳಗಿನ ಯರಪ್ಪನಹಳ್ಳಿ ಮನೆಯಲ್ಲಿ ಡ್ರಗ್ಸ್‌ ಪ್ಯಾಕ್ಟರಿಗಳಿದ್ದವು.

ರಾಜಸ್ಥಾನ ಮೂಲದ ಕಿಂಗ್​​ಪಿನ್​​ಗಳು ಬೆಂಗಳೂರಲ್ಲಿ ಡ್ರಗ್ಸ್​​ ಫ್ಯಾಕ್ಟರಿ ನಡೆಸುತ್ತಿದ್ದು, ಯೋಗಿರಾಜ್ ಕುಮಾರ್ ಮತ್ತು ನಯನ್ ಪವರ್ ಇದರ ಪ್ರಮುಖ ರೂವಾರಿಗಳಾಗಿದ್ದಾರೆ. ಕರ್ನಾಟಕ ಮಾತ್ರವಲ್ಲದೆ ದೇಶದ ಹಲವೆಡೆ ಇವರು ಡ್ರಗ್ಸ್​​ ಫ್ಯಾಕ್ಟರಿ ನಡೆಸುತ್ತಿದ್ದಾರೆ ಎನ್ನಲಾಗಿದೆ. ಉಳಿದ ಆರೋಪಿಗಳಿಗೂ ಮಹಾರಾಷ್ಟ್ರ ಪೊಲೀಸರು ಶೋಧ ಮುಂದುವರಿಸಿದ್ದಾರೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *