
Read Time:1 Minute, 12 Second
ದಾವಣಗೆರೆಯಿಂದ ಮಂಗಳೂರಿಗೆ ಬರುತ್ತಿದ್ದ ಬಸ್ ಅಪಘಾತವಾಗಿ, ಮಗು ಸಾವನ್ನಪ್ಪಿರುವ ಘಟನೆಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟ್ನಲ್ಲಿ ನಡೆದಿದೆ.



ಒಂದೂವರೆ ವರ್ಷದ ಮಗು ಮೃತಪಟ್ಟಿದ್ದರೆ, ಘಟನೆಯಲ್ಲಿ 10 ಜನರಿಗೆ ಗಂಭೀರ ಗಾಯವಾಗಿದೆ. ಬಸ್ ದಾವಣಗೆರೆಯಿಂದ ಮಂಗಳೂರು ಕಡೆ ಹೋಗುತ್ತಿತ್ತು ಎನ್ನಲಾಗಿದ್ದು, ಘಟನೆ ಸಂಬಂಧ ಹೊಸನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಾವಣಗೆರೆಯಿಂದ ಮಂಗಳೂರಿಗೆ ತೆರಳುತ್ತಿದ್ದ ದುರ್ಗಾಂಬ ಸಂಸ್ಥೆಯ ಬಸ್ ಹುಲಿಕಲ್ ಘಾಟಿಯಲ್ಲಿ ಧರೆಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಮಗು ಸಾವನ್ನಪ್ಪಿದೆ. ಶರೀಫಾ ಬಿ (57) , ಇಮಾಮ್ ಸಾಬ್ (73), ಸಫಾನ (28) ಎಂಬುವವರು ಗಾಯಗೊಂಡಿದ್ದಾರೆ. ಅವರನ್ನು ಉಡುಪಿಯ ಆದರ್ಶನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆಯಲ್ಲಿ ಬಸ್ಸಿನ ಮುಂಭಾಗ ಜಖಂ ಆಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.



