
ಮಂಗಳೂರು: ನಗರದ ರಾವ್ ಆಂಡ್ ರಾವ್ ಸರ್ಕಲ್ ಬಳಿ ಅಕ್ರಮ ಬಾಂಗ್ಲಾದೇಶಿಗರು ನೆಲೆಸಿದ್ದಾರೆಂದು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡಿ, ಅಮಾಯಕರ ಮೇಲೆ ಹಲ್ಲೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ.



ಇತ್ತೀಚೆಗೆ ವಾಟ್ಸಾಪ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ “ಮಂಗಳೂರು ಮಿನಿ ಬಾಂಗ್ಲಾ ಆಗುವ ಮೊದಲು ಎಚ್ಚೆತ್ತುಕೊಳ್ಳಿ” ಎಂಬ ಸಂದೇಶವೊಂದು ವೈರಲ್ ಆಗಿತ್ತು. ಮಂಗಳೂರಿನ ಸ್ಟೇಟ್‌ಬ್ಯಾಂಕ್ ಬಳಿಯ ರಾವ್ ಆಂಡ್ ರಾವ್ ಸರ್ಕಲ್‌ನಲ್ಲಿರುವ ಕುಟುಂಬವೊಂದನ್ನು ಗುರಿಯಾಗಿಸಿ ಈ ಸುಳ್ಳು ಸುದ್ದಿ ಹಬ್ಬಿಸಲಾಗಿತ್ತು. ಆದರೆ ಪೊಲೀಸ್ ತನಿಖೆಯಲ್ಲಿ ಈ ಕುಟುಂಬವು 2014ರಲ್ಲೇ ಮಂಗಳೂರಿನಲ್ಲಿ ಆಸ್ತಿ ಖರೀದಿಸಿದ ದಾಖಲೆಗಳನ್ನು ಹೊಂದಿರುವ ಭಾರತೀಯ ಪ್ರಜೆಗಳು ಎಂಬುದು ದೃಢಪಟ್ಟಿದೆ.
ಕಮಿಷನರ್ ಅವರ ಎಚ್ಚರಿಕೆ:
ಈ ಕುರಿತು ಮಾಹಿತಿ ನೀಡಿರುವ ಪೊಲೀಸ್ ಕಮಿಷನರ್ ಅವರು, “ಕೇವಲ ಶಂಕೆಯ ಆಧಾರದ ಮೇಲೆ ಅಮಾಯಕರನ್ನು ಬಾಂಗ್ಲಾದೇಶಿಯರು ಎಂದು ಬಿಂಬಿಸಿ ಹಲ್ಲೆ ಮಾಡುವುದು ಅಥವಾ ಪ್ರಚೋದನೆ ನೀಡುವುದು ಕಾನೂನುಬಾಹಿರ” ಎಂದು ಎಚ್ಚರಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಒಬ್ಬನನ್ನು ಬಂಧಿಸಲಾಗಿದೆ.



