
Read Time:58 Second
ವಲಸೆ ಕಾರ್ಮಿಕರಿಗೆ ಬೆದರಿಕೆಯೊಡ್ಡಿದ ಆರೋಪದಲ್ಲಿ ಹಿಂದೂ ಪರ ಸಂಘಟನೆ ಮುಖಂಡ, ಕೊಲೆ ಪ್ರಕರಣವೊಂದರ ಆರೋಪಿ ಪುನೀತ್ ಕೆರೆಹಳ್ಳಿಯನ್ನು ಬೆಂಗಳೂರಿನ ಬನ್ನೇರುಘಟ್ಟ ಪೊಲೀಸರು ಬಂಧಿಸಿದ್ದಾರೆ.



ಬೆಂಗಳೂರಿನಲ್ಲಿ ವಲಸೆ ಕಾರ್ಮಿಕರು ವಾಸವಿದ್ದ ಸ್ಥಳಕ್ಕೆ ಅಕ್ರಮವಾಗಿ ನುಗ್ಗಿ ಅವರ ಪೌರತ್ವ ಹಾಗೂ ಗುರುತಿನ ದಾಖಲೆಗಳನ್ನು ಕೇಳಿ ಬೆದರಿಕೆಯೊಡ್ಡಿದ ಆರೋಪವಿತ್ತು.
ಈ ಹಿನ್ನಲೆಯಲ್ಲಿ ಬೆಂಗಳೂರಿನ ಬನ್ನೇರುಘಟ್ಟ ಪೊಲೀಸ್ ಠಾಣಾ ಪೊಲೀಸರು ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ್ದಾರೆ. ಬಂಧನ ಸುದ್ದಿ ತಿಳಿಯುತ್ತಿದ್ದಂತೆ ಪುನೀತ್ ಬೆಂಬಲಿಗರು ಠಾಣೆ ಎದುರು ಜಮಾಯಿಸಿದ್ದು, ಪೊಲೀಸರು ಭದ್ರತೆ ಏರ್ಪಡಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ.



