
ಕೋಝಿಕೋಡ್ : ಬಸ್ ಪ್ರಯಾಣ ಸಮಯದಲ್ಲಿ ಸಹ ಪ್ರಯಾಣಿಗ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ ಹಂಚಿಕೊಂಡ ನಂತರ ಸಹ ಪ್ರಯಾಣಿಗ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಶಿಮ್ಜಿತಾ ಮುಸ್ತಫಾ ಅವರನ್ನು ಬಂಧಿಸಲಾಗಿದೆ.



ಬಸ್ಸಿನಲ್ಲಿ ಸಹ ಪ್ರಯಾಣಿಕ ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಅಪಾದಿಸಿ ಪ್ರಯಾಣಿಕ ದೀಪಕ್ ಅವರ ವಿಡಿಯೋ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದ್ದರು, ಇದರಿಂದ ಅವಮಾನವನ್ನು ಸಹಿಸಿಕೊಳ್ಳಲಾಗದೆ ದೀಪಕ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದರು.
ಈ ಪ್ರಕರಣ ಕೇರಳದಾದ್ಯಂತ ಭಾರೀ ಆಕ್ರೋಷಕ್ಕೆ ಕಾರಣವಾಗಿತ್ತು, ಪ್ರಕರಣದ ನಂತರ ಆರೋಪಿ ಶಿಮ್ಜಿತಾ ಮುಸ್ತಫಾ ತಲೆಮರೆಸಿಕೊಂಡಿದ್ದರು,ನಂತರ ಆಕೆಯನ್ನು ಕೋಝಿಕೋಡ್ ವೈದ್ಯಕೀಯ ಕಾಲೇಜು ಪೊಲೀಸರು ವಡಕಾರದಲ್ಲಿರುವ ಆಕೆಯ ಸಂಬಂಧಿಕರ ಮನೆಯಲ್ಲಿ ಪತ್ತೆ ಹಚ್ಚಿ ಆಕೆಯನ್ನು ಬಂಧಿಸಿದ್ದಾರೆ. ನಂತರ ಆಕೆಯನ್ನು ಕೊಯಿಲಾಂಡಿ ತಾಲ್ಲೂಕು ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ನಂತರ ಠಾಣೆಗೆ ಕರೆತರಲಾಯಿತು.


ಆಕೆಯ ವಿರುದ್ಧ ಲುಕೌಟ್ ನೋಟಿಸ್ ಜಾರಿಯಾದ ನಂತರ ಆಕೆಯನ್ನು ಬಂಧಿಸಲಾಯಿತು. ಉಳ್ಳತ್ತೋಡಿಯ ಕೊಳಂಗರಕಂಡಿಯ ಗೋವಿಂದಪುರದ ಆತನ ತಾಯಿ ನೀಡಿದ ದೂರಿನ ಮೇರೆಗೆ ಪೊಲೀಸರು ಶಿಜ್ಮಿತಾ ವಿರುದ್ಧ ಪ್ರಕರಣ ದಾಖಲಿಸಿದ್ದರು. ಆಕೆಯ ಮೇಲೆ ಆತ್ಮಹತ್ಯೆಗೆ ಪ್ರಚೋದನೆ ವಿಧಿಸಲಾಗಿತ್ತು. ಶಿಮ್ಜಿತಾ ದೇಶ ಬಿಟ್ಟು ಹೋಗುತ್ತಾರೆ ಎಂಬ ಮಾಹಿತಿ ಬಂದ ನಂತರ ಪೊಲೀಸರು ಲುಕೌಟ್ ನೋಟಿಸ್ ಜಾರಿ ಮಾಡಿದ್ದರು. ಆಕೆಯ ಮೇಲೆ ಹೇರಲಾದ ಆರೋಪಗಳಿಗೆ ಗರಿಷ್ಠ ಹತ್ತು ವರ್ಷಗಳ ಜೈಲು ಶಿಕ್ಷೆ ಮತ್ತು ದಂಡ ವಿಧಿಸಬಹುದಾಗಿದೆ. ಈ ಮಧ್ಯೆ, ಶಿಮ್ಜಿತಾ ಕೋಝಿಕ್ಕೋಡ್ ಜಿಲ್ಲಾ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ. ಆಕೆಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನಾಳೆ ಪರಿಗಣಿಸುವ ಸಾಧ್ಯತೆಯಿದೆ.


