
Read Time:1 Minute, 11 Second
ಉಡುಪಿ: ಪ್ರವಾಸಿ ದೋಣಿಯೊಂದು ಸಮುದ್ರದಲ್ಲಿ ಮುಳುಗಿದ ಪರಿಣಾಮ ನಾಲ್ವರ ಗಂಭೀರ ಸೇರಿದಂತೆ ಹಲವು ಮಂದಿ ಅಸ್ವಸ್ಥಗೊಂಡ ಘಟನೆ ಸೋಮವಾರ ಬೆಳಿಗ್ಗೆ ಕೋಡಿಬೆಂಗ್ರೆ ಬೀಚ್ ಸಮೀಪ ನಡೆದಿದೆ.



ರೆಸಾರ್ಟ್ ಲ್ಲಿ ಉಳಿದಿದ್ದ ಪ್ರವಾಸಿಗರನ್ನು ವಿಹಾರಕ್ಕೆಂದು ದೋಣಿಯಲ್ಲಿ ಸಮುದ್ರಕ್ಕೆ ಕರೆದುಕೊಂಡು ಹೋಗಲಾಗಿತ್ತು. ಇದರಲ್ಲಿ ಸುಮಾರು 10-15 ಪ್ರವಾಸಿಗರಿದ್ದರು. ಇವರು ಯಾರು ಕೂಡ ಲೈಫ್ ಜಾಕೆಟ್ ಹಾಕಿಲ್ಲ ಎಂದು ತಿಳಿದುಬಂದಿದೆ.
ನೀರಿನಲ್ಲಿ ದೋಣಿ ಅಕಸ್ಮಿಕವಾಗಿ ಮುಳುಗಿದ್ದು, ಎಲ್ಲ ಪ್ರವಾಸಿಗರು ನೀರಿಗೆ ಬಿದ್ದರೆಂದು ತಿಳಿದುಬಂದಿದೆ. ಇದರಲ್ಲಿ ಹಲವು ಮಂದಿಯನ್ನು ರಕ್ಷಿಸಲಾಗಿದೆ. ಆದರೆ ಇದರಲ್ಲಿ ನಾಲ್ವರು ತೀವ್ರವಾಗಿ ಅಸ್ವಸ್ಥಗೊಂಡಿದ್ದು, ಇಬ್ಬರು ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುಯತ್ತಿದ್ದಾರೆ. ಸ್ಥಳಕ್ಕೆ ಮಲ್ಪೆ ಪೊಲೀಸರು ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.



