ಮಂಗಳೂರು: ದೈವಗಳ ಮೂರ್ತಿ, ಪೂಜಾ ಸಾಮಗ್ರಿ ಕಳ್ಳತನ ಪ್ರಕರಣ; ಇಬ್ಬರ ಬಂಧನ, ಸ್ವತ್ತು ವಶ

0 0
Read Time:3 Minute, 47 Second

ಮಂಗಳೂರು: ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕುಳಾಯಿ ಯಶೋದ ಕ್ಲಿನಿಕ್ ಸಮೀಪದ ಮನೆಯೊಂದರಲ್ಲಿ ನಡೆದ ದೈವಗಳ ಮೂರ್ತಿ ಹಾಗೂ ಪೂಜಾ ಪರಿಕರಗಳ ಕಳ್ಳತನ ಪ್ರಕರಣವನ್ನು ಭೇದಿಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕುಳಾಯಿ ಗ್ರಾಮದ ಅಮಿತಾ ಅವರ ದೂರಿನಂತೆ ತಾಯಿ ಮನೆಯಲ್ಲಿ ದೈವಗಳ ಮೂರ್ತಿಗಳು ಹಾಗೂ ಅದಕ್ಕೆ ಸಂಬಂಧಪಟ್ಟ ಪೂಜಾ ಪರಿಕರಗಳು ಇದ್ದು ಆ ಮನೆಯಲ್ಲಿ ಯಾರೂ ವಾಸವಿರದೇ ಕೇವಲ ಪೂಜೆ ಮಾಡಿ ದೀಪ ಹಚ್ಚಿ ನಂತರ ಬೀಗ ಹಾಕುತ್ತಿದ್ದರು ಎನ್ನಲಾಗಿದೆ.

ದಿನಾಂಕ: 26-12-2025 ರಂದು ರಾತ್ರಿ ಸಮಯ ಯಾರೋ ಅಪರಿಚಿತರು ಮನೆಯ ಮೇಲ್ಚಾವಣಿಯ ಹಂಚು ತೆಗೆದು ಮನೆಯೊಳಗೆ ಪ್ರವೇಶಿಸಿ ಸುಮಾರು ರೂ 1,00,000/- ಮೌಲ್ಯದ ಪಸಪ್ಪ ದೈವದ ತಾಮ್ರದ ಮೂರ್ತಿ-1, ಮಂತ್ರದೇವತೆಯ ಬೆಳ್ಳಿಯ ಮೂರ್ತಿ-1, ಕಲ್ಲುರ್ಟಿ ಪಂಜುರ್ಲಿ ದೈವದ ತಾಮ್ರದ ಮೂರ್ತಿ-1, ಬೆಳ್ಳಿಯ ಕಡ್ಸಲೆ (ಖಡ್ಗ)-1, ತಾಮ್ರದ ಘಂಟೆ–2, ತಾಮ್ರದ ಚೆಂಬು–4, ಹಾಗೂ ಎಲ್.ಇ.ಡಿ ಟಿ.ವಿ-1 ಕಳವು ಮಾಡಿದ ಬಗ್ಗೆ ಠಾಣಾ ಅ.ಕ್ರ 170/2025 ರಂತೆ ಪ್ರಕರಣವನ್ನು ದಾಖಲಿಸಿಕೊಂಡು ಸುರತ್ಕಲ್ ಪೊಲೀಸರು ಕೃತ್ಯ ನಡೆದ ಸ್ಥಳದ ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳನ್ನು, ತಾಂತ್ರಿಕ ವಿಧಾನಗಳನ್ನು ಪರಿಶೀಲನೆ ನಡೆಸಿದಂತೆ ಬಜಪೆ ನಿವಾಸಿ ವಾಜೀದ್ ಜೆ ಯಾನೆ ವಾಜಿ ಎಂಬಾತನ್ನು ದಸ್ತಗಿರಿ ಮಾಡಿ ವಿಚಾರಿಸಲಾಗಿ ಆತನ ಹೇಳಿಕೆಯಂತೆ ಸದ್ರಿ ಕೃತ್ಯ ಎಸಗಿದ್ದಾಗಿ ಹಾಗೂ ಮನೆಕಳ್ಳತನ ಮಾಡಿದ ಮಾಲಿನಲ್ಲಿ ಹಿತ್ತಾಳೆ ಹಾಗೂ ತಾಮ್ರದ ಸಾಮಾಗ್ರಿಗಳನ್ನು ಜೋಕಟ್ಟೆಯ ಸಯ್ಯದ್ ಆಲಿ ಎಂಬಾತನಿಗೆ ಮಾರಾಟ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ.

ಈ ಹಿನ್ನೆಲೆಯಲ್ಲಿ ಸಯ್ಯದ್ ಎಂಬಾತನನ್ನು ದಸ್ತಗಿರಿ ಮಾಡಿ ಆರೋಪಿತರುಗಳಿಂದ ಮನೆಯಿಂದ ಕಳ್ಳತನವಾದ ಸುಮಾರು 1,95,000/- ರೂ ಮೌಲ್ಯದ ಬೆಳ್ಳಿಯ ಮಂತ್ರದೇವತೆಯ ಮೂರ್ತಿ, ಕೊಡೆ, ಕಡ್ಸಲೆ, ಸುಮಾರು ರೂ 2,750/- ಮೌಲ್ಯದ ಹಿತ್ತಾಳೆ ಪೂಜಾ ಸಾಮಾಗ್ರಿ, ಸುಮಾರು 300/- ಮೌಲ್ಯದ ತಾಮ್ರದ ಪೂಜಾ ಸಾಮಾಗ್ರಿ, ಸುಮಾರು 2,000/- ಮೌಲ್ಯದ ಟಿ.ವಿ & ಸೆಟ್ ಆಪ್ ಬಾಕ್ಸ್, ಆರೋಪಿತರ 2 ಮೊಬೈಲ್ ಹಾಗೂ ಕಾವೂರು ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಮಾಡಿದ ಸುಮಾರು 30,000/- ಮೌಲ್ಯದ ಸ್ಕೂಟರ್-1 ಅನ್ನು ಮಹಜರು ಮುಖೇನ ಸ್ವಾಧೀನ ಪಡೆಸಿಕೊಂಡಿರುತ್ತಾರೆ.

ಪ್ರಕರಣದಲ್ಲಿ ಮನೆ ಕಳ್ಳತನ ಮಾಡಿದ ಆರೋಪಿ ವಾಜೀದ್ ಜೆ @ ವಾಜಿ ಈತನ ಮೇಲೆ ಸುರತ್ಕಲ್ ಠಾಣೆಯಲ್ಲಿ ‘ಬಿ’ ರೌಡಿ ಹಾಳೆ ಹಾಗೂ ಎಂಓಬಿ ತೆರೆಯಲಾಗಿದ್ದು ಈತನ ಮೇಲೆ ಮಂಗಳೂರು ನಗರ, ಉಡುಪಿ, ಉತ್ತರ ಕನ್ನಡ, ಹಾಸನ ಜಿಲ್ಲೆಗಳಾದ್ಯಂತ 1 ಕೊಲೆಯತ್ನ, 2 ದರೋಡೆ, 3 ದನ ಕಳ್ಳತನ, 6 ಮನೆಕಳ್ಳತನ, 3 ವಾಹನ ಕಳ್ಳತನ, 1 ಇತರ ಪ್ರಕರಣಗಳು ದಾಖಲಾಗಿದ್ದು ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದು ನ್ಯಾಯಾಲಯವು ದಸ್ತಗಿರಿ ವಾರಂಟ್ ಹೊರಡಿಸಿದ್ದು, ಆರೋಪಿತರನ್ನು ದಿನಾಂಕ: 28.01.2026 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಲಯವು ಆರೋಪಿತರಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *