
Read Time:56 Second
ಮಂಗಳೂರು: ಮನೆಯ ಗೋಡೆ ಕುಸಿದು ಬಿದ್ದ ಪರಿಣಾಮ ಇಬ್ಬರು ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮುನ್ನೂರು ಗ್ರಾಮದ ಕುತ್ತಾರು ಮದನಿ ನಗರ ಎಂಬಲ್ಲಿ ನಡೆದಿದೆ.



ಮೃತರನ್ನು ಯಾಸಿರ್(45),ಅವರ ಪತ್ನಿ ಮರಿಯಮ್ಮ(40) ಮಕ್ಕಳಾದ ರಿಯಾನ ಮತ್ತು ರಿಫಾನ ಎಂದು ಗುರುತಿಸಲಾಗಿದೆ.
ಜೋರಾಗಿ ಸುರಿದ ಮಳೆಗೆ ಮನೆಯ ಗೋಡೆ ಮೇಲೆ ಬಿದ್ದು ಈ ದುರಂತ ಸಂಭವಿಸಿದೆ. ಮನೆಯ ಅವಶೇಷಗಳ ಅಡಿಯಿಂದ ಮೂವರ ಮೃತದೇಹಗಳನ್ನು ಸ್ಥಳೀಯರು ಹೊರತೆಗೆದಿದ್ದಾರೆ. ಬಾಲಕಿಯೊಬ್ಬಳ ಮೃತದೇಹಕ್ಕಾಗಿ ಕಾರ್ಯಾಚರಣೆ ಮುಂದುವರಿದಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ



