
Read Time:1 Minute, 13 Second
ಬೆಂಗಳೂರು : ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಅನ್ಯಾಯವಾಗುತ್ತಿದ್ದು, ಕಡ್ಡಾಯವಾಗಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸಲು ಆಗ್ರಹಿಸಿ ನಿನ್ನೆ ರಾಜ್ಯಾದ್ಯಂತ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೆಳಗ್ಗೆ 11 ಗಂಟೆಯಿಂದ ಸಂಜೆ 4ರವರೆಗೆ ಬೃಹತ್ ಪ್ರತಿಭಟನೆ ನಡೆಸಲಾಯಿತು.



ಪ್ರತಿಭಟನೆಯಲ್ಲಿ ಕರವೇ ವತಿಯಿಂದ ಡಾ. ಸರೋಜಿನಿ ಮಹಿಷಿ ವರದಿ ಜಾರಿಯಾಗುವಂತೆ ಬೆಂಗಳೂರಿನ ಫ್ರಿಡಂ ಪಾರ್ಕನಲ್ಲಿ ಬೃಹತ್ ಪ್ರತಿಭಟನೆ ಮುಖಾಂತರ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕುರಿತು ಕ ರ ವೇ ರಾಜ್ಯ ಅಧ್ಯಕ್ಷರಾದ ಟಿ.ಎ.ನಾರಾಯಣ ಗೌಡರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಇದೇ ಸಂದರ್ಭದಲ್ಲಿ ಕನ್ನಡ ಚಿತ್ರ ನಟ ನೆನಪಿರಲಿ ಪ್ರೇಮ, ನಟಿ ಪೂಜಾ ಗಾಂಧಿ ಹಾಗೂ ಹಿರಿಯರು ಭಾಗಿಯಾಗಿದ್ದರು.

