
Read Time:1 Minute, 4 Second
ನವದೆಹಲಿ : ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಸುಪ್ರೀಂಕೋರ್ಟ್ ಬಿಗ್ ಶಾಕ್ ನೀಡಿದ್ದು, ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಪ್ರಕರಣದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾ ಮಾಡಿದೆ.


ಡಿಸಿಎಂ ಡಿ.ಕೆ.ಶಿವಕುಮಾಮಾರ್ ಅವರು, ಹೈಕೋರ್ಟ್ ಆದೇಶ ಪ್ರಶ್ನಿಸಿ ರದ್ದು ಕೋರಿ ಮೇಲ್ಮನವಿ ಸಲ್ಲಿಸಿದ್ದರು.
ಆದರೆ ಸುಪ್ರೀಂಕೋರ್ಟ್ ಇದೀಗ ಅರ್ಜಿಯನ್ನು ವಜಾ ಮಾಡಿ ಆದೇಶ ಹೊರಡಿಸಿದೆ.


ಆದಾಯ ಮೀರಿ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂದು ಆರೋಪಿಸಿ ಸಿಬಿಐ 2020ರ ಅಕ್ಟೋಬರ್ 3 ರಂದು ಭ್ರಷ್ಟಾಚಾರ ನಿಯಂತ್ರಣ ಕಾಯಿದೆಯಡಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿತ್ತು. ಈ ಮಧ್ಯೆ, 2023ರಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಶಿವಕುಮಾರ್ ವಿರುದ್ಧದ ಪ್ರಕರಣವನ್ನು ಸಿಬಿಐ ತನಿಖೆಯಿಂದ ಹಿಂಪಡೆದು ಲೋಕಾಯುಕ್ತ ತನಿಖೆಗೆ ಆದೇಶಿಸಿತ್ತು.
