
Read Time:1 Minute, 21 Second
ಶನಿವಾರ ಬೆಳಿಗ್ಗೆ 8.30ಕ್ಕೆ ಪಾದಯಾತ್ರೆಯನ್ನು ಬೆಂಗಳೂರಿನಿಂದ ಆರಂಭಿಸಲಾಗುತ್ತದೆ. ಈ ಪಾದಯಾತ್ರೆಯನ್ನು ಕೇಂದ್ರ ಸಚಿವ ಕುಮಾರಸ್ವಾಮಿಯೇ ಚಾಲನೆ ನೀಡಲಿದ್ದಾರೆ ಎಂಬುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದ್ದಾರೆ.


ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಶನಿವಾರ ಮೈಸೂರಿಗೆ ಬೆಂಗಳೂರಿನಿಂದ ಪಾದಯಾತ್ರೆ ಆರಂಭಗೊಳ್ಳಲಿದೆ. ಸಣ್ಣಪುಟ್ಟ ಗೊಂದಲ ಇದ್ದರೂ ಪಾದಯಾತ್ರೆ ನಡೆಯುತ್ತದೆ ಎಂಬುದಾಗಿ ಹೇಳಿದರು.
ಶನಿವಾರ ಬೆಳಿಗ್ಗೆ 8.30ಕ್ಕೆ ಪಾದಯಾತ್ರೆ ಆರಂಭವಾಗಲಿದೆ. ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಯುತ್ತೆ. ಕುಮಾರಸ್ವಾಮಿಯೇ ಪಾದಯಾತ್ರೆಗೆ ಚಾಲನೆ ನೀಡುತ್ತಾರೆ ಎಂದರು.

ಮುಡಾದಲ್ಲಿ ಭ್ರಷ್ಟಾಚಾರ ಆಗಿದ್ದನ್ನು ಸದನದಲ್ಲೇ ಸಿಎಂ ಸಿದ್ಧರಾಮಯ್ಯ ಒಪ್ಪಿಕೊಂಡಿದ್ದಾರೆ. 4 ಸಾವಿರ ಕೋಟಿ ರೂ ಬೆಲೆ ಬಾಳುವ ಸೈಟ್ ಕೊಟ್ಟಿದ್ದಾರೆ ಎಂಬುದಾಗಿ ದೆಹಲಿಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದರು.


