
Read Time:1 Minute, 3 Second
ಮಂಗಳೂರು: ಸಿಎಂ ಸಿದ್ದರಾಮಯ್ಯರ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿಸಿದ ರಾಜ್ಯಪಾಲರ ನಡೆಯನ್ನು ಖಂಡಿಸಿ ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಮನಪಾದ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ಎಂಎಲ್ಸಿ ಐವನ್ ಡಿಸೋಜ ಅವರು ರಾಜ್ಯಪಾಲರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.


ಗೋ ಬ್ಯಾಕ್ ಗವರ್ನರ್, ಗೆಟ್ ಔಟ್ ಗೆಹ್ಲೋಟ್ ಎಂದು ಘೋಷಣೆ ಕೂಗಿದ ಐವನ್ ಡಿಸೋಜ ಮಾತನಾಡಿ, ಕೇಂದ್ರ ಸರ್ಕಾರ ರಾಜ್ಯಪಾಲರನ್ನು ವಾಪಾಸ್ ಕರೆಸದಿದ್ದರೆ ಉಗ್ರ ಹೋರಾಟ ಮಾಡುತ್ತೇವೆ. ಒಂದು ವೇಳೆ ಅದು ಆಗದಿದ್ದಲ್ಲಿ ಬಾಂಗ್ಲಾ ಪ್ರಧಾನಿಗೆ ಬಂದ ಸ್ಥಿತಿ ಕರ್ನಾಟಕದ ರಾಜ್ಯಪಾಲರಿಗೆ ಬರಬಹುದು. ರಾಜ್ಯಪಾಲರನ್ನು ಕಿತ್ತು ಹಾಕಲು ಬಾಂಗ್ಲಾ ಸ್ಥಿತಿ ಬರಬಹುದು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.