
ಬೆಳ್ತಂಗಡಿ: ಅಕ್ರಮ ಕಲ್ಲುಕೊರೆಗೆ ದಾಳಿ ನಡೆಸಿ ಬೆಳ್ತಂಗಡಿ ತಾಲೂಕು ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಬಂಧನ ವಿರೋಧಿಸಿ ಶಾಸಕ ಹರೀಶ್ ಪೂಂಜಾ ನೇತೃತ್ವದಲ್ಲಿ ಬಿಜೆಪಿಯಿಂದ ಬೆಳ್ತಂಗಡಿಯಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.


ಬೆಳ್ತಂಗಡಿ ಮಿನಿ ವಿಧಾನಸೌಧದ ಮುಂಭಾಗ ಪ್ರತಿಭಟನೆ ನಡೆಯಿತು. ಪ್ರತಿಭಟನೆ ವೇಳೆ ಬೆಳ್ತಂಗಡಿ ಪಿಎಸ್ಐ, ಪೊಲೀಸ್ ಇಲಾಖೆಗೆ ಧಿಕ್ಕಾರ ಕೂಗಲಾಯಿತು. ಬೆಳ್ತಂಗಡಿ ಪೊಲೀಸ್ ಇಲಾಖೆ ಕಾಂಗ್ರೆಸ್ ಏಂಜೆಂಟ್ ಎಂಬ ಆಕ್ರೋಶ ಕೇಳಿ ಬಂದಿತು. ರಾಜ್ಯದ ಕಾಂಗ್ರೆಸ್ ಸರಕಾರ ಸುಳ್ಳು ಕೇಸ್ ದಾಖಲಿಸದೆ ಎಂದು ಆರೋಪಿಸಲಾಯಿತು.

ಈ ಪ್ರತಿಭಟನೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಬಿಜೆಪಿ ಲೋಕಸಭಾ ಅಭ್ಯರ್ಥಿಗಳಾದ ಬ್ರೀಜೇಶ್ ಚೌಟ, ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ದ.ಕ.ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಭಾಗಿಯಾಗಿದ್ದರು. ಪ್ರತಿಭಟನಾಕಾರರು ಬೆಳ್ತಂಗಡಿ ತಾಲೂಕು ಕಚೇರಿ ಗೆ ಕಾಂಗ್ರೆಸ್ ಕಚೇರಿ ನಾಮಫಲಕ ಅಂಟಿಸಿ ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿ, ಅಮಾಯಕ ಕಾರ್ಯಕರ್ತರ ಮೇಲೆ ಇಲ್ಲಸಲ್ಲದ ಆರೋಪ ಹೊರಿಸಿ ಪ್ರಕರಣ ದಾಖಲು ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿತು.


