BREAKING : ನಾಗಮಂಗಲ ಗಲಭೆ ಕೇಸ್ : ಪೊಲೀಸ್ ಇನ್ಸ್ ಪೆಕ್ಟರ್ ಅಶೋಕ್ ಕುಮಾರ್ ಅಮಾನತು!

0 0
Read Time:1 Minute, 34 Second

ಮಂಡ್ಯ : ನಾಗಮಂಗಲ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ನಾಗಮಂಗಲ ಪಟ್ಟಣ ಪೊಲೀಸ್ ಇನ್ಸ್ ಪೆಕ್ಟರ್ ಅಶೋಕ್ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಕರ್ತವ್ಯ ಲೋಪ, ನಿರ್ಲಕ್ಷ್ಯ ಆರೋಪದ ಹಿನ್ನೆಲೆಯಲ್ಲಿ ನಾಗಮಂಗಲ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಅಶೋಕ್ ಕುಮಾರ್ ಅವರನ್ನು ಅಮಾನತು ಮಾಡಿ ನಿನ್ನೆ ರಾತ್ರಿ ಐಜಿಪಿ ಆದೇಶ ಹೊರಡಿಸಿದ್ದಾರೆ.

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಾಗಮಂಗಲದಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಪೊಲೀಸರು ಈವರೆಗೆ 150 ಆರೋಪಿಗಳ ವಿರುದ್ಧ ಎಫ್ ಐಆರ್ ದಾಖಲಾಗಿದ್ದು, 52 ಮಂದಿಯನ್ನು ಅರೆಸ್ಟ್ ಮಾಡಲಾಗಿದೆ ಎಂದು ಮಂಡ್ಯ ಎಸ್ ಪಿ ಮಲ್ಲಿಕಾರ್ಜುನ್ ಮಾಹಿತಿ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಮಂಡ್ಯ ಎಸ್ ಪಿ ಮಲ್ಲಿಕಾರ್ಜುನ, ನಾಗಮಂಗಲದಲ್ಲಿ ಸದ್ಯ ಪರಿಸ್ಥಿತಿ ಹತೋಟಿಗೆ ಬಂದಿದೆ. ಅಂಗಡಿಗಳು ಓಪನ್ ಆಗುತ್ತಿವೆ. ಪರಿಸ್ಥಿತಿ ಯಥಾಸ್ಥಿತಿಗೆ ಮರಳುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲಾಗಿದೆ. ಗಲಭೆಗೆ ಸಂಬಂಧಿಸಿದಂತೆ 6 ಎಫ್‌ಐಆರ್ ದಾಖಲಿಸಲಾಗಿದೆ. 52 ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದರು.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *