
Read Time:1 Minute, 9 Second
ನವದೆಹಲಿ: ನಾನು ಅಲ್ಪಸಂಖ್ಯಾತರ ವಿರುದ್ಧ ಒಂದೇ ಒಂದು ಶಬ್ದ ಕೂಡ ಮಾತಾಡಿಲ್ಲ. ಆದರೆ ಕಾಂಗ್ರೆಸ್ನ ವೋಟ್ ಬ್ಯಾಂಕ್ ರಾಜಕಾರಣದ ವಿರುದ್ಧ ಮಾತಾಡಿದ್ದೇನೆ. ವೋಟ್ ಬ್ಯಾಂಕ್ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಸುದ್ದಿ ಸಂಸ್ಥೆ ಪಿಟಿಐ ಸಂದರ್ಶನದಲ್ಲಿ ಮೋದಿ ಈ ಹೇಳಿಕೆ ನೀಡಿದ್ದಾರೆ. ಬಾಬಾಸಾಹೇಬ್ ಅಂಬೇಡ್ಕರ್, ಪಂಡಿತ್ ಜವಾಹರಲಾಲ್ ನೆಹರು ಅವರೂ ಸೇರಿದಂತೆ ಸಂವಿಧಾನದ ತಯಾರಕರು ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಲು ಆಗದು ಎಂದು ಹೇಳಿದ್ದರು. ಈಗ ಕಾಂಗ್ರೆಸ್ನವರು ಅದರಿಂದ ವಿಮುಖರಾಗುತ್ತಿದ್ದಾರೆ. ಅವುಗಳನ್ನು ಬಹಿರಂಗಪಡಿಸುವ ಜವಾಬ್ದಾರಿ ನನ್ನದು. ಬಿಜೆಪಿ ಎಂದಿಗೂ ಅಲ್ಪಸಂಖ್ಯಾತರ ವಿರುದ್ಧ ಇಲ್ಲ ಎಂದು ಮೋದಿ ಸ್ಪಷ್ಟವಾಗಿ ಹೇಳಿದ್ದಾರೆ.

