ಮಂಗಳೂರು: ದಸರಾ ಫ್ಲೆಕ್ಸ್, ಬ್ಯಾನರ್ ಗಳಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದರೆ ದಂಡ..!-ಮ.ನ.ಪಾ

0 0
Read Time:1 Minute, 12 Second

ಮಂಗಳೂರು: : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದಸರಾ ಹಬ್ಬದ ಪ್ರಯುಕ್ತ ನಗರದ ಮುಖ್ಯ ರಸ್ತೆಗಳಲ್ಲಿ ಅಲಂಕಾರಿಕ ವಿದ್ಯುತ್ ದೀಪಗಳನ್ನು ಅಳವಡಿಸಲಾಗಿರುತ್ತದೆ. ಹಲವಾರು ಸ್ಥಳಗಳಲ್ಲಿ ಸಾರ್ವಜನಿಕ ಹಾಗೂ ಖಾಸಗಿ ಸಂಘ ಸಂಸ್ಥೆಗಳು ತಮ್ಮ ತಮ್ಮ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಗಳನ್ನು ಅಳವಡಿಸಿದ್ದು, ಅನಧಿಕೃತ ಫ್ಲೆಕ್ಸ್, ಬ್ಯಾನರ್ ಗಳಿಗೆ ಅಲಂಕಾರಿಕ ದೀಪಗಳನ್ನು ಅಳವಡಿಸಲು ಮಂಗಳೂರು ನಗರ ಪಾಲಿಕೆಯಿಂದ ಅಳವಡಿಸಿರುವ ಕಂಬ ಮತ್ತು ವಿದ್ಯುತ್ ದೀಪಗಳ ಸಂಪರ್ಕದಿಂದ ಅತಿಕ್ರಮಣವಾಗಿ ವಿದ್ಯುತ್ ಸಂಪರ್ಕ ಪಡೆದಿರುವುದು ಕಂಡುಬಂದಿದೆ.

ಇಂತಹ ಅತಿಕ್ರಮಣ ಸಂಪರ್ಕಗಳಿಗೆ ಕಾನೂನು ಕ್ರಮ ಕೈಗೊಂಡು ದಂಡ ವಿಧಿಸಲಾಗುವುದು ಹಾಗೂ ಯಾವುದೇ ರೀತಿ ಅವಘಡಗಳು ಸಂಭವಿಸಿದ್ದಲ್ಲಿ ಫ್ಲೆಕ್ಸ್, ಬ್ಯಾನರ್ ಅಳವಡಿಸಿದವರನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಮಂಗಳೂರು ಮಹಾನಗರಪಾಲಿಕೆ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *