ಬೆಳ್ತಂಗಡಿ: ಅಕ್ರಮ ಗೋ ಸಾಗಾಟ- 2 ಪಿಕಪ್ ಸಹಿತ ನಾಲ್ವರ ಬಂಧನ..!

0 0
Read Time:1 Minute, 36 Second

ಬೆಳ್ತಂಗಡಿ ತಾಲೂಕಿನ ಮಲವಂತಿಗೆಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಗೋ ಸಾಗಾಟವನ್ನು  ಬೆಳ್ತಂಗಡಿ ಪೊಲೀಸರು ಪತ್ತೆ ಹಚ್ಚಿ ನಾಲ್ವರನ್ನು ಬಂಧಿಸಿದ್ದಾರೆ.

ಪೆರಿಯಡ್ಕ ನಿವಾಸಿ ಯತೀಂದ್ರ(24), ತೋಟತ್ತಾಡಿ ಗ್ರಾಮದ ಬೆಂದ್ರಾಳ ನಿವಾಸಿ ಅರವಿಂದ(30), ಚಾರ್ಮಾಡಿ ಗ್ರಾಮದ ನಿವಾಸಿ ಉಸ್ಮಾನ್ ( 36) ಹಾಗೂ ಚಿಬಿದ್ರೆ ಗ್ರಾಮದ ನಿವಾಸಿ ಆರಿಫ್ (27) ಬಂಧಿತ ಆರೋಪಿಗಳಾಗಿದ್ದು ಈ ಘಟನೆಗೆ ಸಂಬಂಧಿಸಿ ಎರಡು ಪಿಕಪ್ ವಾಹನಗಳು ಹಾಗೂ ಐದು ದನಗಳನ್ನು ವಶಪಡಿಸಿಕೊಂಡಿದ್ದಾರೆ  ಎಂದು ಪೊಲೀಸರು ತಿಳಿಸಿದ್ದಾರೆ. ಮಲವಂತಿಗೆ ಗ್ರಾಮದ ಎಳನೀರು ದಿಡುಪೆ ರಸ್ತೆಯಲ್ಲಿ ಪಿಕಪ್ ವಾಹನದಲ್ಲಿ ಅಕ್ರಮವಾಗಿ ದನಗಳನ್ನು ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಆಧಾರದಲ್ಲಿ ಬೆಳ್ತಂಗಡಿ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. ಮಲವಂತಿಗೆ ಗ್ರಾಮದ ಕಜಕೆ ಎಂಬಲ್ಲಿ ಎಳನೀರು ಕಡೆಯಿಂದ ಬರುತ್ತಿದ್ದ ಎರಡು ಪಿಕಪ್ ವಾಹನಗಳನ್ನು ತಡೆದು ಪರಿಶೀಲಿಸಿದಾಗ ಐದು ದನಗಳನ್ನು ಸಾಗಾಟ ಮಾಡುತ್ತಿರುವುದು ಕಂಡು ಬಂದಿದೆ. ವಾಹನದಲ್ಲಿ ಇದ್ದವರ ಬಳಿ ದನಗಳ ಸಾಗಾಟಕ್ಕೆ ಯಾವುದೇ ಪರವಾನಿಗೆಗಳು ಇಲ್ಲದಿರುವುದು ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *