
Read Time:45 Second
ದ.ಕ. ಜಿಲ್ಲೆಯ ಎಲ್ಲಾ ತಾಲೂಕಿನ ನ್ಯಾಯಬೆಲೆ ಅಂಗಡಿಗಳಲ್ಲಿ ಬಿಪಿಎಲ್ ಹಾಗೂ ಅಂತ್ಯೋದಯ ಪಡಿತರ ಚೀಟಿದಾರರಿಗೆ
ಅಕ್ಟೋಬರ್ ತಿಂಗಳ ಪಡಿತರ ವಿತರಣೆಯು ಆರಂಭಗೊಂಡಿದೆ.
ಸರ್ವರ್ ಅಳವಡಿಕೆಯಿಂದಾಗಿ ಈ ತಿಂಗಳ ಪಡಿತರ ವಿತರಣೆಯು ವಿಳಂಬವಾಗಿತ್ತು. ಈ ತಿಂಗಳ ಪಡಿತರವನ್ನು ಅ.31 ರೊಳಗೆ ಪಡಿತರ ಚೀಟಿದಾರರು ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಲ್ಲಿ ಯಾವುದೇ ಗೊಂದಲಕ್ಕೆ ಎಡೆ ಮಾಡಿಕೊಳ್ಳದೆ ಆಧಾರ್ ಬಯೋಮೆಟ್ರಿಕ್ ಮೂಲಕ ಪಡಿತರ ಪಡೆಯಬಹುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯು ಪ್ರಕಟನೆಯಲ್ಲಿ ತಿಳಿಸಿದೆ.

