
Read Time:1 Minute, 13 Second
ಮಂಗಳೂರು : ನಗರದ ಹೊರವಲಯದ ಅಡ್ಡೂರು-ಪೊಳಲಿ ಸೇತುವೆ ಮತ್ತು ಉಳಾಯಿಬೆಟ್ಟು ಕಿರು ಸೇತುವೆಯ ಧಾರಣಾ ಸಾಮರ್ಥ್ಯ ಹೆಚ್ಚಿಸುವ ಹಾಗೂ ಎರಡೂ ಕಡೆ ಹೊಸ ಸೇತುವೆ ನಿರ್ಮಿಸುವ ಕುರಿತು ಅ. ೨೯ರಂದು ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಮತ್ತು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಜಿಲ್ಲಾಧಿಕಾರಿಯೊಂದಿಗೆ ಮಾತುಕತೆ ನಡೆಸಿದರು. ಎರಡೂ ಕಡೆ ಸೇತುವೆಯಲ್ಲಿ ಘನ ವಾಹನ ಸಂಚಾರ ಸ್ಥಗಿತದಿಂದ ಸಾರ್ವಜನಿಕ ಬಸ್ ಸಂಚಾರ ಮತ್ತು ಕಾರ್ಮಿಕರಿಗೆ ತೀವ್ರ ತೊಂದರೆ ಉಂಟಾಗಿದೆ. ಇತ್ತೀಚೆಗೆ ಪೊಳಲಿ ಮತ್ತು ಉಳಾಯಿಬೆಟ್ಟಿನಲ್ಲಿ ಸೇತುವೆ ತಜ್ಞರು ನಡೆಸಿದ ಪರೀಕ್ಷೆ ವೇಳೆ ಎರಡೂ ಸೇತುವೆಗಳು ಶಿಥಿಲಗೊಂಡಿದೆ. ಸೇತುವೆಗಳ ಧಾರಣಾ ಶಕ್ತಿ ಹೆಚ್ಚಿಸುವ ಹಾಗೂ ಹೊಸ ಸೇತುವೆ ನಿರ್ಮಾಣದ ಕುರಿತು ವರದಿ ನೀಡಿದ್ದರು. ಈ ಸಂದರ್ಭದಲ್ಲಿ ಪಿಡಬ್ಲ್ಯೂಡಿ ಇಂಜಿನಿಯರ್ಗಳು ಹಾಗೂ ಎರಡೂ ಕಡೆಯ ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.

