
Read Time:50 Second
ಪುತ್ತೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಯರಿಗೆ ಕಿರುಕುಳ ನೀಡುತ್ತಿದ್ದ ಆರೋಪದಲ್ಲಿ ಯುವಕನೊಬ್ಬನಿಗೆ ಸಾರ್ವಜನಿಕರು ಗೂಸಾ ಕೊಟ್ಟ ಘಟನೆ ನಡೆದಿದೆ.


ಇಬ್ಬರು ಯುವಕರು ಬಸ್‌ಗಳಲ್ಲಿ ಇತರ ಪ್ರಯಾಣಿಕರೊಂದಿಗೆ ಬಸ್ ಏರುವ ಮತ್ತು ಇಳಿಯುವ ನೆಪದಲ್ಲಿ ಯುವತಿಯರಿಗೆ ಕಿರುಕುಳ ನೀಡುತ್ತಿದ್ದರು. ಇದನ್ನು ದೂರದಿಂದಲೇ ನೋಡುತ್ತಿದ್ದ ಸಾರ್ವಜನಿಕರು ಇಬ್ಬರು ಯುವಕರನ್ನು ವಿಚಾರಿಸಲು ಹೋದಾಗ ಅವರು ಅಲ್ಲಿಂದ ತಪ್ಪಿಕೊಂಡಿದ್ದರು.
ಈ ಪೈಕಿ ಓರ್ವ ಸಾರ್ವಜನಿಕರ ಕೈಗೆ ಸಿಕ್ಕಿ ಬಿದ್ದು ಸಾರ್ವಜನಿಕರಿಂದ ಗೂಸಾ ತಿಂದಿದ್ದಾನೆ ಎಂದು ಮಾಹಿತಿ ತಿಳಿಯಲಾಗಿದೆ.

