
Read Time:1 Minute, 6 Second
ಕಾರ್ಕಳ: ಮುಂಬರುವ ಲಕ್ಷ ದೀಪೋತ್ಸವ ಪ್ರಯುಕ್ತ ಹಿಂದೂಗಳಿಗೆ ಮಾತ್ರ ಅಂಗಡಿ ನಡೆಸಲು ಜಾಗ ಕೊಡಿ ಹೇಳಿಕೊಂಡು ಪ್ರಚಾರ ಮಾಡುತ್ತಾ, ಸಮುದಾಯಗಳ ನಡುವೆ ದ್ವೇಷ ಭಾವನೆ ಮೂಡಿಸುತ್ತಿದ್ದಾರೆ ಎಂದು ಆರೋಪಿಸಿ ಕಾರ್ಕಳದ ರಮೇಶ್ ಶೆಟ್ಟಿ ಮತ್ತು ಇತರ ಮೂವರ ವಿರುದ್ಧ ಕಾರ್ಕಳ ನಗರ ಠಾಣೆ ಪೊಲೀಸರು ಸುಮೊಟೊ ಪ್ರಕರಣ ದಾಖಲಿಸಿದ್ದು, ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ.


ಹಿಂದೂ ಕಾರ್ಯಕರ್ತರ ಮೇಲೆ ಈ ರೀತಿ ಕೇಸು ದಾಖಲಿಸುವ ಮೂಲಕ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಪೊಲೀಸರೇ ಅವಕಾಶ ಮಾಡಿಕೊಡುತ್ತಿದ್ದಾರೆ. ಸುಮೊಟೊ ಪ್ರಕರಣವನ್ನು ಪೊಲೀಸ್ ಇಲಾಖೆ ಹಿಂಪಡೆಯಬೇಕು.
ಸೌಹಾರ್ದತೆ ಕಾರಣಕ್ಕೆ ಹಿಂದೂ ಕಾರ್ಯಕರ್ತರಿಗೆ ವಿನಾಕರಣ ತೊಂದರೆ ನೀಡಬಾರದು ಎಂದು ಬಜರಂಗದಳ ರಾಜ್ಯ ಸಂಚಾಲಕ ಸುನಿಲ್ ಕೆ.ಆರ್. ಒತ್ತಾಯಿಸಿದ್ದಾರೆ.

