
Read Time:1 Minute, 0 Second
ಢಾಕಾ: ಬಾಂಗ್ಲಾದೇಶದಲ್ಲಿ ನೆಲೆಸಿರುವ ಮತ್ತು ಹಿಂದೂ (Hindu) ಅಲ್ಪಸಂಖ್ಯಾತರ ಪ್ರಮುಖ ವಕೀಲ ಇಸ್ಕಾನ್ (ISKCON) ಸಂಸ್ಥೆಯ ಧಾರ್ಮಿಕ ನಾಯಕ ಚಿನ್ಮಯ್ ಕೃಷ್ಣ ದಾಸ್ ಬ್ರಹ್ಮಚಾರಿ ಅವರನ್ನು ಢಾಕಾ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.


ಬಾಂಗ್ಲಾ ತೊರೆಯಲು ಮುಂದಾಗುತ್ತಿದ್ದಾಗ ಸೋಮವಾರ(ನ.25) ಅಧಿಕಾರಿಗಳು ಅವರನ್ನು ವಿಮಾನ ನಿಲ್ದಾಣದಲ್ಲಿ ತಡೆದರು ಮತ್ತು ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ. ಇವರ ಬಂಧನ ಬಗ್ಗೆ ಅಧಿಕಾರಿಗಳು ಇಲ್ಲಿಯವರೆಗೆ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ಬಾಂಗ್ಲಾದೇಶ ರಾಜಧಾನಿಯಲ್ಲಿ ಹಿಂದೂಗಳನ್ನು ಸೇರಿಸಿ ಬೃಹತ್ ಪ್ರತಿಭಟನೆ ನಡೆಸಿದ್ದಕ್ಕೆ ಅವರನ್ನು ಬಂಧಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.