
Read Time:1 Minute, 10 Second
ಬೆಳ್ತಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಪಿಯುಸಿ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಎಂಬಲ್ಲಿ ನಡೆದಿದೆ.


ಮಿತ್ತಬಾಗಿಲು ಕೋಡಿ ನಿವಾಸಿ ಪಿಯುಸಿ ವಿದ್ಯಾರ್ಥಿನಿ ಋಶ್ವಿ(17) ವಿಷ ಸೇವಿಸಿ ಮೃತಪಟ್ಟವಳು. ಋಶ್ವಿ ಬೆಳ್ತಂಗಡಿಯ ಕಾಲೇಜೊಂದರಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. 2 ದಿನಗಳ ಹಿಂದೆ ಈಕೆ ವಿಷ ಸೇವಿಸಿದ್ದಳು.
ಪರಿಣಾಮ ಆಕೆಯ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಆದ್ದರಿಂದ ಆಕೆಯನ್ನು ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಋಶ್ವಿ ಮೃತಪಟ್ಟಿದ್ದಾಳೆ. ಆತ್ಮಹತ್ಯೆಗೆ ನಿಖರ ಕಾರಣಗಳು ತಿಳಿದು ಬಂದಿಲ್ಲ. ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


