
ಮಂಗಳೂರು: ಸಂಚಾರಿ ನಿಯಮ ಉಲ್ಲಂಘನೆ ಮಾಡಲಾಗಿದೆ ಎಂಬ ಎಪಿಕೆ ಫೈಲ್ ಅನ್ನು ವಾಟ್ಸ್ಆ್ಯಪ್‌ಗೆ ಕಳುಹಿಸಿ ಮಂಗಳೂರಿನ ಯುವಕನೊಬ್ಬನಿಗೆ 1.31 ಲಕ್ಷ ರೂ. ವಂಚಿಸಿದ ಆರೋಪಿಯನ್ನು ಮಂಗಳೂರು ಸೆನ್ ಕ್ರೈಂ ಪೊಲೀಸರು ದೆಹಲಿಯಲ್ಲಿ ಬಂಧಿಸಿದ್ದಾರೆ. ದೆಹಲಿಯ ಮಾಳವೀಯಾ ನಗರದ ಪಂಚಶೀಲ ವಿಹಾರದ ಗೌರವ್ ಮಕ್ವಾನ್(25) ಬಂಧಿತ ಆರೋಪಿ. ಮಂಗಳೂರಿನ ಕೊಟ್ಟಾರದ ಯದುನಂದನ್ ಆಚಾರ್ಯ ಎಂಬವರ ವಾಟ್ಸ್ಆ್ಯಪ್‌ಗೆ VAHAN PARIVAHAN.apk ಫೈಲ್ ಬಂದಿತ್ತು. ಆ ಫೈಲ್ ಅನ್ನು ಡೌನ್‌ಲೋಡ್ ಮಾಡುತ್ತಿದ್ದಂತೆ ಅವರ ಫ್ಲಿಪ್‌ಕಾರ್ಟ್ ಖಾತೆ ಹ್ಯಾಕ್ ಆಗಿದೆ.


ಸೈಬರ್ ವಂಚಕರು ಈ ಖಾತೆಯನ್ನು ಬಳಸಿಕೊಂಡು ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್‌ಗಳಿಂದ 1,31,000 ರೂ. ಮೌಲ್ಯದ 2 ಮೊಬೈಲ್ ಪೋನ್ 1 ಏರ್ ಪ್ಯಾಡ್ ಹಾಗೂ ಗಿಫ್ಟ್ ವೋಚರ್ ಗಳನ್ನು ಖರೀದಿ ಮಾಡಿದ್ದಾರೆ. ಈ ಬಗ್ಗೆ ತನಿಖೆ ಕೈಗೊಂಡಿದ್ದು, ಫ್ಲಿಪ್ ಕಾರ್ಟ್ ಕಂಪೆನಿಯಿಂದ ಮಾಹಿತಿಯನ್ನು ಪಡೆದುಕೊಂಡು, ಪ್ರಕರಣ ದಾಖಲಿಸಲಾಗಿತ್ತು. ತಕ್ಷಣ ಸೆನ್ ಕ್ರೈಂ ಪೊಲೀಸ್ ಠಾಣಾ ಪಿಎಸ್ಐ ಗುರಪ್ಪ ಕಾಂತಿ ಹಾಗೂ ಪಿಸಿ ತಿಪ್ಪಾರೆಡ್ಡಿಯವರು ದೆಹಲಿಗೆ ವಿಶೇಷ ಕರ್ತವ್ಯದಲ್ಲಿ ತೆರಳಿ ಆರೋಪಿ ಗೌರವ್ ಮಕ್ವಾನ್‌ನನ್ನು ಪ್ರಕರಣ ದಾಖಲಾದ 48 ಗಂಟೆಯೊಳಗೆ ಬಂಧಿಸಿದ್ದಾರೆ. ಆರೋಪಿಯಿಂದ ಪ್ರಕರಣಕ್ಕೆ ಸಂಬಂಧಿಸಿದ 2 ಅಂಡ್ರಾಯ್ಡ್ ಫೋನ್ ಸೇರಿದಂತೆ 5 ಐಫೋನ್-15, ಎರಡು ಏರ್‌ಪ್ಯಾಡ್ ಸಹಿತ ಆರೋಪಿ ಕೃತ್ಯಕ್ಕೆ ಬಳಸಿದ ಮೊಬೈಲ್ ಸೇರಿದಂತೆ ಒಟ್ಟು 4,00,000 ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
I was increased small cuts Nothing Can t said Semeon Glue and pressed