
Read Time:1 Minute, 6 Second
ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿದ ಆಂಬ್ಯುಲೆನ್ಸ್ ಮನೆಯ ಅಂಗಳಕ್ಕೆ ನುಗ್ಗಿದ ಘಟನೆ ನೆಕ್ಕಿಲಾಡಿಯಲ್ಲಿ ನಡೆದಿದೆ.


ಪುತ್ತೂರಿನಿಂದ ನೆಕ್ಕಿಲಾಡಿ ಕಡೆಗೆ ಬರುತ್ತಿದ್ದ ಆಂಬ್ಯುಲೆನ್ಸ್ ಇಲ್ಲಿನ ವನಸುಮ ನರ್ಸರಿ ರಸ್ತೆಯಲ್ಲಿ ನೇರಸಾಗಿ ಮನೆಯೊಂದರ ವರಾಂಡಕ್ಕೆ ನುಗ್ಗಿದೆ. ಘಟನೆಯಿಂದ ಮನೆಯ ಆವರಣಗೋಡೆಗೆ ಹಾನಿಯಾಗಿದ್ದು, ಆ್ಯಂಬುಲೆನ್ಸ್ ಮನೆಯ ಗೋಡೆಗೆ ಢಿಕ್ಕಿಯಾಗುವುದು ಸ್ವಲ್ಪದರಲ್ಲೇ ತಪ್ಪಿದೆ. ಈ ಸಂದರ್ಭ ರಸ್ತೆ ಬದಿ ಶಾಲಾ ಮಕ್ಕಳು ನಿಂತಿದ್ದು ಅವರು ಅಪಾಯದಿಂದ ಪಾರಾಗಿದ್ದಾರೆ.
ಕನ್ಯಾಡಿಯ ಸೇವಾ ಭಾರತಿಗೆ ಸೇರಿದ ಆಂಬ್ಯುಲೆನ್ಸ್ ಇದಾಗಿದ್ದು, ಆರೋಗ್ಯ ಶಿಬಿರವೊಂದಕ್ಕೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ ಎನ್ನಲಾಗಿದೆ. ಘಟನೆಯಿಂದ ಆಂಬ್ಯುಲೆನ್ಸ್ ಚಾಲಕ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ.

