ಮಂಗಳೂರು: ಲಂಚ ಸ್ವೀಕಾರ ಆರೋಪ ಸಾಬೀತು- ಪಿಡಿಒಗೆ 3 ವರ್ಷ ಜೈಲು…!!

0 0
Read Time:57 Second

ಮಂಗಳೂರು: ವ್ಯಕ್ತಿಯೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ಭ್ರಷ್ಟಾಚಾರ ನಿಗ್ರಹ ದಳದ ಕೈಗೆ ಸಿಲುಕಿದ ಆರೋಪಿ ಪಿಡಿಒಗೆ ಮಂಗಳೂರಿನ 3ನೆ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯವು 3 ವರ್ಷದ ಜೈಲು ಶಿಕ್ಷೆ ಮತ್ತು 50 ಸಾವಿರ ರೂ. ದಂಡ ವಿಧಿಸಿದೆ.

ಕಡಬ ತಾಲೂಕಿನ ಐತೂರು ಗ್ರಾಮ ಪಂಚಾಯತ್ ಪಿಡಿಒ ಪ್ರೇಮ್ ಸಿಂಗ್ ನಾಯ್ಕ್ ಶಿಕ್ಷೆಗೊಳಗಾದವರು. 

2019ರ ಜೂ.3ರಂದು ವ್ಯಕ್ತಿಯೊಬ್ಬರಿಂದ 9 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸರು ದಾಳಿ ನಡೆಸಿದ್ದರು.

ಪೊಲೀಸ್ ನಿರೀಕ್ಷಕ ಸೋಮಶೇಖರ್ ತನಿಖೆ ನಡೆಸಿದ್ದರೆ, ಸರಕಾರದ ಪರವಾಗಿ ರವೀಂದ್ರ ಮನ್ನಿಪ್ಪಾಡಿ ವಾದಿಸಿದ್ದರು.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *