2026ಕ್ಕೆ ನಕ್ಸಲಿಸಂ ನಿರ್ಮೂಲನೆ – ಅಮಿತ್ ಶಾ

0 0
Read Time:1 Minute, 37 Second

ನವದೆಹಲಿ: ನಮ್ಮ ಯೋಧರ ಪ್ರಾಣತ್ಯಾಗ ವ್ಯರ್ಥವಾಗಲು ನಾವು ಬಿಡೋದಿಲ್ಲ. 2026ರ ಹೊತ್ತಿಗೆ ಭಾರತದಲ್ಲಿ ನಕ್ಸಲಿಸಂ ಇರದಂತೆ ಮಾಡ್ತೀವಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಛತ್ತೀಸ್‌ಗಢದ ಬಿಜಾಪುರದಲ್ಲಿ ನಕ್ಸಲೀಯರು ಅಟ್ಟಹಾಸ ಮೆರೆದಿದ್ದು, ಜಂಟಿ ಕಾರ್ಯಾಚರಣೆ ಮುಗಿಸಿ ಹಿಂತಿರುಗುತ್ತಿದ್ದ ಡಿಆರ್‌ಜಿ ಯೋಧರ ವಾಹನವನ್ನು ಐಇಡಿ ಮೂಲಕ ಸ್ಫೋಟಿಸಿದ್ದಾರೆ. ಈ ಘಟನೆಯಲ್ಲಿ ಒಂಬತ್ತು ಯೋಧರು ಹುತಾತ್ಮರಾಗಿದ್ದರು. ಈ ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಹುತಾತ್ಮ ಯೋಧರಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, ಬಿಜಾಪುರದಲ್ಲಿ (ಛತ್ತೀಸ್‌ಗಢ) ಐಇಡಿ ಸ್ಫೋಟದಲ್ಲಿ ಡಿಆರ್‌ಜಿ ಯೋಧರನ್ನು ಕಳೆದುಕೊಂಡ ಸುದ್ದಿಯಿಂದ ತುಂಬಾ ದುಃಖವಾಗಿದೆ. ವೀರ ಯೋಧರ ಕುಟುಂಬಗಳಿಗೆ ನನ್ನ ಆಳವಾದ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಈ ದುಃಖವನ್ನು ಪದಗಳಲ್ಲಿ ವ್ಯಕ್ತಪಡಿಸುವುದು ಅಸಾಧ್ಯ, ಆದರೆ ನಮ್ಮ ಸೈನಿಕರ ತ್ಯಾಗ ವ್ಯರ್ಥವಾಗುವುದಿಲ್ಲ ಎಂದು ನಾನು ಭರವಸೆ ನೀಡುತ್ತೇನೆ. ನಾವು ಮಾರ್ಚ್ 2026ರ ವೇಳೆಗೆ ಭಾರತದ ನೆಲದಿಂದ ನಕ್ಸಲಿಸಂ ನಿರ್ಮೂಲನೆ ಮಾಡುತ್ತೇವೆ ಎಂದು ಬರೆದಿದ್ದಾರೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *