
ಮಂಗಳೂರು: ಹಿಂದಿ ಭಾಷೆ ರಾಷ್ಟ್ರೀಯ ಭಾಷೆಯೇ ಅಲ್ಲ ಎಂದು ಮಾಜಿ ಕ್ರಿಕೆಟಿಗ ಅಶ್ವಿನ್ ಹೇಳಿಕೆ ನೀಡಿರುವ ವಿಚಾರಕ್ಕೆ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಶನಿವಾರ(ಜ.11) ಪ್ರತಿಕ್ರಿಯೆ ನೀಡಿದ್ದಾರೆ.


ಇಂದು ಬೆಳಿಗ್ಗೆ ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಹಿಂದಿ ಭಾಷೆಯ ಕುರಿತು ಆರ್. ಅಷ್ವಿನ್ ಒಂದು ದೃಷ್ಟಿಕೋನ ಇಟ್ಟುಕೊಂಡು ಹೇಳಿಕೆ ನೀಡಿದ್ದಾರೆ, ಹಿಂದಿ ಒಂದು ಅಫಿಶಿಯಲ್ ಲ್ಯಾಂಗ್ವೇಜ್, ಪ್ರಧಾನ ಮಂತ್ರಿ ತುಂಬಾ ಕಡೆ ಇದನ್ನೇ ಹೇಳಿದ್ದು, ಕೇವಲ ಹಿಂದಿ ಮಾತ್ರ ರಾಷ್ಟ್ರೀಯ ಭಾಷೆ ಅಂತಲ್ಲ, ಎಲ್ಲಾ ಭಾಷೆಯೂ ರಾಷ್ಟ್ರೀಯ ಭಾಷೆ ಅಂತನೇ ಹೇಳಿದ್ದಾರೆ, ಅಲ್ಲದೆ ಪ್ರಧಾನಿ ಅವರು ಕನ್ನಡ ಭಾಷೆಗೆ ತುಂಬಾ ಮರ್ಯಾದೆ ಕೊಡುತ್ತಾರೆ ಅದೇ ರೀತಿ ತಮಿಳುಗೂ ತುಂಬಾ ಮರ್ಯಾದಿ ಕೊಡುತ್ತಾರೆ,
ಅಶ್ವಿನ್ ಒಂದು ದೃಷ್ಟಿಕೋನದಲ್ಲಿ ಹೇಳಿದ್ದಾರೆ, ಕೇವಲ ಹಿಂದಿ ಮಾತ್ರವಲ್ಲ ಎಲ್ಲಾ ಭಾಷೆಯು ರಾಷ್ಟ್ರೀಯ ಭಾಷೆ ಎಂಬ ಅರ್ಥದಲ್ಲಿ ಅಶ್ವಿನಿ ಹೇಳಿದ್ದಾರೆ ಅಷ್ಟೇ ಬೇರೆ ಏನು ವಿಚಾರ ಇಲ್ಲ ಎಂದು ಹೇಳಿದ್ದಾರೆ.


ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ:
ಎರಡು ದಿನಗಳ ಹಿಂದೆ 6 ಮಂದಿ ನಕ್ಸಲರ ಶರಣಾಗತಿಯ ಕುರಿತು ಸರಕಾರ ನಡೆದು ಕೊಂಡ ರೀತಿ ಸಂಶಯ ಮೂಡಿಸುತ್ತಿದೆ ಎಂದ ಅವರು ಈ ಹಿಂದೆ ನಡೆದ ನಕ್ಸಲ್ ನಾಯಕ ವಿಕ್ರಂ ಗೌಡ ಎನ್ಕೌಂಟರ್ ಕೂಡ ಸಂಶಯ ಮೂಡಿಸುತ್ತಿದೆ ಎಂದು ಹೇಳಿದರು.
