ವಿಟ್ಲ ಉದ್ಯಮಿ ಮನೆಗೆ ನಕಲಿ ಇಡಿ ದಾಳಿ ಪ್ರಕರಣ – ಅಂತಾರಾಜ್ಯ ದರೋಡೆಕೋರ ಅರೆಸ್ಟ್

0 0
Read Time:1 Minute, 42 Second

ವಿಟ್ಲ : ವಿಟ್ಲ ಬೋಳಂತೂರಿನ‌ ಉದ್ಯಮಿಯ ಮನೆಯಲ್ಲಿ ಇ ಡಿ ಅಧಿಕಾರಿಗಳ ಸೋಗಿನಲ್ಲಿ ಬಂದು ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಅಂತರಾಜ್ಯ ದರೋಡೆಕೋರನ ದಕ್ಷಿಣಕನ್ನಡ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಕೇರಳದ ಕೊಲ್ಲಂ ನಿವಾಸಿ ಅನಿಲ್‌ ಫರ್ನಾಂಡಿಸ್‌ ಎಂದು ಗುರುತಿಸಲಾಗಿದೆ. 

ಬಂಧಿತನಿಂದ ಕೃತ್ಯಕ್ಕೆ ಉಪಯೋಗಿಸಿದ KL-02-BP-1104ನೇ ನೊಂದಣಿ ಎರ್ಟಿಗಾ ಕಾರು, 5,00,000/-ರೂ ನಗದು ಹಾಗೂ ನಕಲಿ ಕೃತ್ಯ ನಡೆಸುವಾಗ ಕಾರಿಗೆ ಅಳವಡಿಸಿದ್ದ ನಕಲಿ TN-20-DB-5517ನೇ ನಂಬರ ಪ್ಲೇಟ್‌ನ್ನು ವಶಪಡಿಸಿಕೊಂಡಿದ್ದು, ಸ್ವಾದೀನಪಡಿಸಿಕೊಂಡ ನಗದು ಹಾಗೂ ವಾಹನದ ಒಟ್ಟು ಮೌಲ್ಯ- 11,00,000/- ರೂ ಆಗಿದೆ. 

ಜನವರಿ 3 ರಂದು ರಾತ್ರಿ ಬಂಟ್ವಾಳ ತಾಲೂಕು ವಿಟ್ಲ ಪೊಲೀಸ್‌ ಠಾಣಾ ವ್ಯಾಪ್ತಿಯ ಬೋಳಂತೂರು ನಾರ್ಶ ಎಂಬಲ್ಲಿ, ಉದ್ಯಮಿಯೊಬ್ಬರ ಮನೆಗೆ 06 ಜನ ಅಪರಿಚಿತರು ಇ ಡಿ ಅಧಿಕಾರಿಗಳೆಂದು ನಂಬಿಸಿ, ಮನೆಯ ಶೋಧನೆ ನಡೆಸಿ, ಸುಮಾರು 30 ಲಕ್ಷ ನಗದನ್ನು ದರೋಡೆ ಮಾಡಿ ಪರಾರಿಯಾಗಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳ ಪತ್ತೆಗಾಗಿ ನಾಲ್ಕು ವಿಶೇಷ ತನಿಖಾ ತಂಡ ರಚಿಸಲಾಗಿತ್ತು. ಇದೀಗ ಓರ್ವ ಆರೋಪಿ ಅರೆಸ್ಟ್ ಆಗಿದ್ದು ಉಳಿದವರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *